63 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆದ ಎನ್‌ಐಇಎಲ್‌ಐಟಿ
ಬೆಂಗಳೂರು, ಜುಲೈ 19 : ಎನ್‌ಐಇಎಲ್‌ಐಟಿ 63 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10, 2018 ಕೊನೆಯ ದಿನವಾಗಿದೆ.
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್‌ಫಾರ್ಮೇಶನ್ ಟೆಕ್ನಾಲಜಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಇ/ಬಿ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಅಥವ ಕಂಪ್ಯೂಟರ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಅಂಡ್ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ ಇನ್ ಸೈನ್ಸ್/ಬಿಸಿಎಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ವಯೋಮಿತಿ : ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ 30 ವರ್ಷಗಳು. ಟೆಕ್ನಿಕಲ್ ಅಸಿಸ್ಟೆಂಟ್ 27 ವರ್ಷಗಳು. 10 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ.
ಸಾಮಾನ್ಯ ವರ್ಗ ಮತ್ತು ಇತರ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ/ನಿವೃತ್ತ ಯೋಧರಿಗೆ 300 ರೂ.ಗಳು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ : ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 9,300 ರಿಂದ 34,800 ರೂ. ಪ್ರತಿ ತಿಂಗಳು. ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 5200 ರಿಂದ 20,200 ಪ್ರತಿ ತಿಂಗಳು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications