ಜ್ಯೂನಿಯರ್ ಹಿಂದಿ ಭಾಷಾಂತರಕಾರರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ 20 : ಎನ್‌ಐಎಫ್‌ಟಿ 16 ಜ್ಯೂನಿಯರ್ ಹಿಂದಿ ಭಾಷಾಂತರಕಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 7 ಮಾರ್ಚ್ 2019 ಕೊನೆಯ ದಿನವಾಗಿದೆ.
ರಾಷ್ಟ್ರೀಯ ವಸ್ತ್ರ ವಿನ್ಯಾಸ ತಂತ್ರಜ್ಞಾನ ಸಂಸ್ಥೆ (ಎನ್‌ಐಎಫ್‌ಟಿ) ಜ್ಯೂನಿಯರ್ ಹಿಂದಿ ಭಾಷಾಂತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದಿ ಅಥವ ಇಂಗ್ಲಿಶ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು ಹಿಂದಿ ಅಥವ ಇಂಗ್ಲಿಶ್ ಅನ್ನು ಕಡ್ಡಾಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಯಿತಿ ನಿಗದಿ ಮಾಡಲಾಗಿದೆ.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 9300 ರಿಂದ 34800 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಇತರ ವರ್ಗದ ಅಭ್ಯರ್ಥಿಗಳಿಗೆ 1000 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications