ಬೆಂಗಳೂರು : ನಿಮ್ಹಾನ್ಸ್‌ನಲ್ಲಿ 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 20 : ನಿಮ್ಹಾನ್ಸ್ 13 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 1, 2018 ಕೊನೆಯ ದಿನವಾಗಿದೆ.
ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ (ನಿಮ್ಹಾನ್ಸ್) ಕ್ಲಿನಿಕಲ್ ಸೈಕಲಾಜಿಸ್ಟ್ ಸೇರಿವಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಸೀನಿಯರ್ ಸೈಂಟಿಫಿಕ್ ಆಫೀಸರ್ 2, ಕ್ಲೀನಿಕಲ್ ಸೈಕಾಲಾಜಿಸ್ಟ್ 10, ಡಿಪಾರ್ಟ್‌ಮೆಂಟ್ ಸೆಕೆರೆಟ್ರಿ 1 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಟಿ./ಪಿಎಚ್‌ಡಿ/ಎಂಎ/ಎಂಎಸ್‌ಸಿ/ಎಂಫಿಲ್ ಅಥವ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಸೀನಿಯರ್ ಸೈಂಟಿಫಿಕ್ ಆಫೀಸರ್ ಮತ್ತು ಡಿಪಾರ್ಟ್‌ಮೆಂಟ್ ಸೆಕೆರೆಟ್ರಿ ಹುದ್ದೆಗೆ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಕ್ಲಿನಿಕಲ್ ಸೈಕಾಲಾಜಿಸ್ಟ್ ಹುದ್ದೆಗೆ 35 ವರ್ಷಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 295 ರೂ. + ಜಿಎಸ್‌ಟಿ, ಇತರೆ ಅಭ್ಯರ್ಥಿಗಳಿಗೆ 590 ರೂ.+ಜಿಎಸ್‌ಟಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
ವೇತನ ಶ್ರೇಣಿ
* ಸೀನಿಯರ್ ಸೈಂಟಿಫಿಕ್ ಆಫೀಸರ್ 65000 ರೂ.
* ಕ್ಲೀನಿಕಲ್ ಸೈಕಾಲಾಜಿಸ್ಟ್ 9300-34800
* ಡಿಪಾರ್ಟ್‌ಮೆಂಟ್ ಸೆಕೆರೆಟ್ರಿ 25000 ಪ್ರತಿ ತಿಂಗಳು
ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಸಲ್ಲಿಸಲು ಅಕ್ಟೋಬರ್ 1, ಕೊನೆಯ ದಿನಾಂಕವಾಗಿದೆ. ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ವಿಳಾಸ
The Registrar
NIMHANS, P.B No.2900
Hosur Road
Bengaluru-560029












Click it and Unblock the Notifications