ನಿಮ್ಹಾನ್ಸ್‌ನಲ್ಲಿ 160 ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 04 : ನಿಮ್ಹಾನ್ಸ್ ಬೆಂಗಳೂರು ಘಟಕದಲ್ಲಿ 160 ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ 10, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 160 ಹುದ್ದೆಗಳನ್ನು ಭರ್ತಿ ಮಾಡಲಿದೆ. ವೇತನ ಶ್ರೇಣಿ 44,900 ರಿಂದ 142400 ರೂ.ಗಳಾಗಿವೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಬಿಎಸ್‌ಸಿ ನರ್ಸಿಂಗ್ ಅನ್ನು ರಾಜ್ಯದಿಂದ ಮಾನ್ಯತೆ ಪಡೆದ ಯಾವುದಾದರೂ ಕೌನ್ಸಿಲ್‌ನಿಂದ ಪಡೆದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ 3 ಮತ್ತು ಪಿಎಚ್ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1000 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 750 ರೂ. ಶುಲ್ಕವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡೆಬಿಟ್, ಕ್ರೆಡಿಟ್ ಅಥವ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕಗಳನ್ನು ಪಾವತಿಸಬಹುದಾಗಿದೆ.
ಪ್ರಮುಖ ಅಂಶಗಳು
* ನಿಮ್ಹಾನ್ಸ್‌ನಲ್ಲಿ ಉದ್ಯೋಗ
* 160 ಹುದ್ದೆಗಳು
* ಬೆಂಗಳೂರು
* ಕೊನೆ ದಿನಾಂಕ 10 ಮೇ 2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications