ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮ್ಹಾನ್ಸ್‌ನಲ್ಲಿ 160 ಸ್ಟಾಫ್‌ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಏಪ್ರಿಲ್ 04 : ನಿಮ್ಹಾನ್ಸ್ ಬೆಂಗಳೂರು ಘಟಕದಲ್ಲಿ 160 ಸ್ಟಾಫ್‌ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ 10, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 160 ಹುದ್ದೆಗಳನ್ನು ಭರ್ತಿ ಮಾಡಲಿದೆ. ವೇತನ ಶ್ರೇಣಿ 44,900 ರಿಂದ 142400 ರೂ.ಗಳಾಗಿವೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 73 ಹುದ್ದೆಗಳಿವೆಕರ್ನಾಟಕ ಅರಣ್ಯ ಇಲಾಖೆಯಲ್ಲಿ 73 ಹುದ್ದೆಗಳಿವೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಬಿಎಸ್‌ಸಿ ನರ್ಸಿಂಗ್ ಅನ್ನು ರಾಜ್ಯದಿಂದ ಮಾನ್ಯತೆ ಪಡೆದ ಯಾವುದಾದರೂ ಕೌನ್ಸಿಲ್‌ನಿಂದ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ 3 ಮತ್ತು ಪಿಎಚ್ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

NIMHANS recruitment 2018 : Apply for 160 Staff Nurse posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1000 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 750 ರೂ. ಶುಲ್ಕವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡೆಬಿಟ್, ಕ್ರೆಡಿಟ್ ಅಥವ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕಗಳನ್ನು ಪಾವತಿಸಬಹುದಾಗಿದೆ.

ಎಚ್ಎಎಲ್ ನಲ್ಲಿ 25 ಟೆಕ್ನಿಷಿಯನ್ ಹುದ್ದೆಗಳಿವೆ ಅರ್ಜಿ ಹಾಕಿ!ಎಚ್ಎಎಲ್ ನಲ್ಲಿ 25 ಟೆಕ್ನಿಷಿಯನ್ ಹುದ್ದೆಗಳಿವೆ ಅರ್ಜಿ ಹಾಕಿ!

ಪ್ರಮುಖ ಅಂಶಗಳು
* ನಿಮ್ಹಾನ್ಸ್‌ನಲ್ಲಿ ಉದ್ಯೋಗ
* 160 ಹುದ್ದೆಗಳು
* ಬೆಂಗಳೂರು
* ಕೊನೆ ದಿನಾಂಕ 10 ಮೇ 2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
National Institute of Mental Health and Neuro Sciences (NIMHANS) issued notification for recruitment of 160 Staff Nurse posts. Job seekers should apply before 10th May 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X