NIMHANS Recruitment 2023: ಬೆಂಗಳೂರು ನಿಮ್ಹಾನ್ಸ್‌ನಲ್ಲಿ ಕೈ ತುಂಬ ಸಂಬಳದ ಕೆಲಸ ಖಾಲಿ ಇದೆ
ಬೆಂಗಳೂರು, ಆಗಸ್ಟ್ 27: ರಾಷ್ಟ್ರೀಯ ಮಾನಸಿಕ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (NIMHANS) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಅರ್ಹರಿಂದ ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ನಿಮ್ಹಾನ್ಸ್‌ನಲ್ಲಿ ಒಟ್ಟು ಒಂದು ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಸೆಪ್ಟೆಂಬರ್ 6ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಈ ಮೂಲಕ ಬೆಂಗಳೂರಲ್ಲಿ ಉದ್ಯೋಗಿ ಗಿಟ್ಟಿಸಿಕೊಳ್ಳಲು ಇರುವ ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮುನ್ನ ಶೈಕ್ಷಣಿಕ ಅರ್ಹತೆ, ವೇತನ ಸೇರಿದಂಥೆ ನೇಮಕಾತಿ ಪೂರ್ಣ ವಿವರ ಇಲ್ಲಿ ತಿಳಿದು ಅರ್ಜಿ ಸಲ್ಲಿಸುವಂತೆ ಅಧಿಸೂಚನೆ ತಿಳಿಸಿದೆ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ - ನಿಮ್ಹಾನ್ಸ್
ಒಟ್ಟು ಹುದ್ದೆ - 1
ಖಾಲಿ ಹುದ್ದೆ ಹೆಸರು- ಪ್ರಾಜೆಕ್ಟ್ ಅಸೋಸಿಯೇಟ್-I
ಶೈಕ್ಷಣಿಕ ಅರ್ಹತೆ - ಸ್ನಾತಕೋತ್ತರ ಪದವಿ ಉತ್ತೀರ್ಣ.
ತಿಂಗಳ ವೇತನ - 31,000 ರೂಪಾಯಿ
ಉದ್ಯೋಗದ ಸ್ಥಳ- ಬೆಂಗಳೂರು
ಶೈಕ್ಷಣಿಕ ಅರ್ಹತೆ
ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯ ಕಡ್ಡಾಯವಾಗಿ ಬಯೋ ಮೆಡಿಕಲ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಯಸ್ಸು-ಸಡಿಲಿಕೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಮತ್ತು ವೇತನ
ಅರ್ಜಿ ಸಲ್ಲಿಸಿದವರಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುವುದು ನಂತರ ಸಂದರ್ಶನ ನಡೆಸಲಾಗುವುದು ಎಂದು ನಿಮ್ಹಾನ್ಸ್ ತಿಳಿಸಿದೆ. ಇನ್ನೂ ಆಯ್ಕೆ ಆಗುವವರಿಗೆ ಮಾಸಿಕ ₹ 31,000 ವೇತನ ನೀಡಲಾಗುವುದು ಎಂದು ಹೇಳಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲಾಗುವುದು, ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.












Click it and Unblock the Notifications