NIMHANS Recruitment: ಬೆಂಗಳೂರು ನಿಮ್ಹಾನ್ಸ್‌ನಲ್ಲಿ ಭರ್ಜರಿ ಉದ್ಯೋಗ ಅವಕಾಶ, ನೇಮಕಾತಿ ವಿವರ
ಬೆಂಗಳೂರು: ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ನಗರದ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (NIMHANS) ತನ್ನಲ್ಲಿ ಖಾಲಿ ಇರುವ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ಭರ್ತಿ ಆರಂಭಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ನೀವು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (NIMHANS) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ವಿವರ, ಪ್ರಮುಖ ದಿನಾಂಕಗಳು ಹಾಗೂ ವಿದ್ಯಾರ್ಹತೆ ವಿವರ ಇಲ್ಲಿದೆ.

ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ
ಹುದ್ದೆಗಳ ಹೆಸರು: ಗುಂಪು ಬಿ ಮತ್ತು ಸಿ
ಒಟ್ಟು ಹುದ್ದೆಗಳು: 52
ಪೋಸ್ಟಿಂಗ್: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಮಾರ್ಚ್ 4
ಅರ್ಜಿ ಸಲ್ಲಿಕೆ ಈಗಾಗಲೇ ಶುರುವಾಗಿದೆ.
ಖಾಲಿ ಹುದ್ದೆಗಳ ಮಾಹಿತಿ
ಒಟ್ಟು ಹುದ್ದೆಗಳ ಪೈಕಿ ಜೂನಿಯರ್ ಸೆಕ್ರೆಟೇರಿಯಲ್ ಸಹಾಯಕ- 22 ಹುದ್ದೆಗಳು, ಸ್ಟೆನೋಗ್ರಾಫರ್ ಗ್ರೇಡ್ II- 09 ಹುದ್ದೆಗಳು, ಸಹಾಯಕ ಬೋಧಕ (ಪಂಚಕರ್ಮ)- 04 ಹುದ್ದೆಗಳು, ಇಇಜಿ ತಂತ್ರಜ್ಞ ಮತ್ತು ಗ್ರಂಥಾಲಯ ಸಹಾಯಕ- ತಲಾ 03 ಹುದ್ದೆಗಳು, ವೈದ್ಯಕೀಯ ದಾಖಲೆಗಳ ತಂತ್ರಜ್ಞ- 03 ಹುದ್ದೆಗಳು ಹಾಗೂ ಹಿರಿಯ ವೈಜ್ಞಾನಿಕ ಸಹಾಯಕ, ಕಲಾವಿದ, ಛಾಯಾಗ್ರಾಹಕ, ಆಸ್ಪತ್ರೆ ಸಹಾಯಕ ಮತ್ತು ಕ್ಷೌರಿಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ.
ಶೈಕ್ಷಣಿಕ ಅರ್ಹತೆ
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ ಮತ್ತು ವೇತನ
ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ನಂತರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಜಾತಿ ಮೀಸಲಾತಿ ಆಧಾರದಲ್ಲಿ ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳಿಗೆ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ ವಿವರ
ಜನರಲ್, ಒಬಿಸಿ, ಇಡಬ್ಲುಎಸ್ ವರ್ಗದವರಿಗೆ ₹1180, ಎಸ್‌ಸಿ, ಎಸ್‌ಟಿ 885 ರೂಪಾಯಿ. ಪಿಡಬ್ಲುಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nimhans.ac.in/ ಗೆ ಭೇಟಿ ನೀಡಬೇಕು. ಅಲ್ಲಿರುವ ನೇಮಕಾತಿ ವಿಭಾಗದಲ್ಲಿ ಗ್ರೂಪ್ ಬಿ ಮತ್ತು ಸಿ ನೋಟಿಫಿಕೇಶನ್ 2026 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಗತ್ಯ ದಾಖಲೆ ಸಹಿತ ಅರ್ಜಿ ಹಾಕಬೇಕು.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್‌ಸೈಟ್‌ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್‌ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್ ಫಾಲೊ ಮಾಡಿ.












Click it and Unblock the Notifications