ನಿಮ್ಹಾನ್ಸ್‌ನಲ್ಲಿ 36,000 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ- ಕೊನೆಯ ದಿನಾಂಕ, ಅರ್ಹತೆಗಳ ಬಗ್ಗೆ ತಿಳಿಯಿರಿ
ಬೆಂಗಳೂರು, ಡಿಸೆಂಬರ್, 26: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ (NIMAHNS)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಆ ಹುದ್ದೆ ಯಾವುದು?, ಸಂಬಳ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ವಿದ್ಯಾರ್ಹತೆ ಬಗ್ಗೆ ಇಲ್ಲಿ ತಿಳಿಯಿರಿ.
1 ಸೈಕಾಲಜಿಸ್ಟ್ ಹುದ್ದೆ ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬುಧವಾರವೇ (ಡಿಸೆಂಬರ್ 27) ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಪ್ರಮುಖ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಬೇಕಾಗಿದೆ. ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ ಒಂದು ಸೈಕಾಲಜಿಸ್ಟ್ ಖಾಲಿ ಇದ್ದು, ಇದಕ್ಕೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಅರ್ಜಿ ಸಲ್ಲಿಸಬಯಸುವವರು ಎಂ.ಎಸ್ಸಿ, ಎಂಎ ವಿದ್ಯಾರ್ಹತೆ ಹೊಂದಿರಬೇಕು. ಬೆಂಗಳೂರಿನಲ್ಲೇ ಕೆಲಸ ಮಾಡಬೇಕಾಗಿದ್ದು, ಆಯ್ಕೆಯಾದವರು ತಿಂಗಳಿಗೆ ₹36,000 ಸಂಬಳ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 27, 2023 ಕೊನೆಯ ದಿನವಾಗಿದೆ.
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಕ್ಲಿನಿಕಲ್ ಸೈಕಾಲಜಿ, ಸೈಕಾಲಜಿಯಲ್ಲಿ ಎಂಎ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅಭ್ಯರ್ಥಿಗಳು ಡಿಜಿಟಲ್ ಟ್ರೈನರ್, ಕಂಟೆಂಟ್ ಡೆವಲಪ್ಮೆಂಟ್, ಕಂಟೆಂಟ್ ಡೆಲಿವರಿ ಫಾರ್ ಮೊಬೈಲ್ ಆ್ಯಪ್/LMSನಲ್ಲಿ ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿ ಬೆಂಗಳೂರಿನಲ್ಲಿ ಉದ್ಯೋಗ ಮಾಡಬೇಕಾಗುತ್ತದೆ ಎಂದು ತಿಳಿಸಿದೆ.












Click it and Unblock the Notifications