50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್‌ಎಲ್‌ಸಿ
ಬೆಂಗಳೂರು, ಮಾರ್ಚ್ 12 : ಎನ್‌ಎಲ್‌ಸಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮಾರ್ಚ್ 27, 2018 ಕೊನೆಯ ದಿನವಾಗಿದೆ.
ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ (ಎನ್‌ಎಲ್‌ಸಿ) 50 ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ವೇತನ ಶ್ರೇಣಿ 10000 ರೂ.ಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಚಾರ್ಟೆಡ್ ಅಕೌಂಟಂಟ್‍ಗಳ ಸಂಸ್ಥೆ(ಐಸಿಎಐ) ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇನ್ಸಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/3/2018ಕ್ಕೆ ಅನ್ವಯವಾಗುವಂತೆ.
ಪ್ರಮುಖ ಅಂಶಗಳು
* ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ನಲ್ಲಿ ಕೆಲಸ
* 50 ಹುದ್ದೆಗಳು
* ದೇಶದ ಯಾವುದೇ ನಗರದಲ್ಲಿ ಕೆಲಸ
* ಮಾರ್ಚ್ 27, 2018 ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications