ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು, ಜನವರಿ 01 : ಕರ್ನಾಟಕ ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಆಯ್ದ ಇಲಾಖೆಗಳ 'ಎ' ಮತ್ತು 'ಬಿ' ಶ್ರೇಣಿಯ ಹುದ್ದೆಗಳಿಗೆ ಸಂದರ್ಶನ ನಡೆಸದೇ ಲಿಖಿತ ಪರೀಕ್ಷೆ ಮೂಲಕ ನೇರವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಕೆಪಿಎಸ್ ಪರೀಕ್ಷೆ ನಡೆಸುತ್ತದೆ. ಆದರೆ, ಸಂದರ್ಶನ ನಡೆಸುವುದಿಲ್ಲ.

ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನೇಮಕಾತಿ ಪಟ್ಟಿಯನ್ನು ತಯಾರು ಮಾಡಲಾಗುತ್ತದೆ. "ವೈದ್ಯರು, ಇಂಜಿನಿಯರ್ ಸೇರಿದಂತೆ ಕೆಲವು ವೃತ್ತಿಪರ ಹುದ್ದೆಗಳಿಗೆ ಈ ರೀತಿ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ" ಎಂದು ಸಂಸದೀಯ ವ್ಯವಹಾರ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದರು.

 No Interview For A And B Grade Post In Karnataka Govt

ಯಾವ-ಯಾವ ಇಲಾಖೆಯಲ್ಲಿ ಯಾವ ಹುದ್ದೆಗಳಿಗೆ ಸಂದರ್ಶನ ನಡೆಸದೇ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ಸರ್ಕಾರ ತೀರ್ಮಾನಿಸಲಿದೆ.

ವಿಶೇಷವಾಗಿ ವೈದ್ಯರು, ಇಂಜಿನಿಯರ್‌ಗಳಂತಹ ಸೇವಾ ವರ್ಗದ ಹುದ್ದೆಗಳಿಗೆ ಮೌಖಿಕ ಸಂದರ್ಶನ ಅಗತ್ಯವಿಲ್ಲ ಎಂದು ಸರ್ಕಾರ ತೀರ್ಮಾನಿಸಿದೆ. ಸಂದರ್ಶನವಿಲ್ಲದೇ ನೇಮಕಾತಿ ಕೈಗೊಂಡರೆ ಲಿಖಿತ ಪರೀಕ್ಷೆಗಳ ಅಂಕಗಳು ಸಹ ಹೆಚ್ಚಾಗಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+