ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ
ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂಬ ಕೂಗು ಆಗಾಗ ಕೇಳಿಬರುತ್ತಿರುತ್ತದೆ. ಆದರೆ, ವಲಸೆ ಕಾರ್ಮಿಕರಿಂದಾಗಿ ಸ್ಥಳೀಯರಿಗೆ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಅಧಿಕೃತ ದೂರುಗಳು ಸಲ್ಲಿಕೆಯಾಗಿಲ್ಲ ಎಂದು ಕಾರ್ಮಿಕ ಇಲಾಖೆ ಸ್ಪಷ್ಟಪಡಿಸಿದೆ.
ವಿಧಾನಪರಿಷತ್ನಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ರಾಜ್ಯದ ಉದ್ಯೋಗ ಮಾರುಕಟ್ಟೆ ಮತ್ತು ವಲಸೆ ಕಾರ್ಮಿಕರ ವಾಸ್ತವ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಧಾನಪರಿಷತ್ನಲ್ಲಿ ಸಚಿವರ ಸ್ಪಷ್ಟನೆ
ವಿಧಾನಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರು ಚುಕ್ಕೆ ಗುರುತಿಲ್ಲದ ಪ್ರಶ್ನೆಯಡಿ ವಲಸೆ ಕಾರ್ಮಿಕರು ಮತ್ತು ಸ್ಥಳೀಯರ ಉದ್ಯೋಗದ ಕುರಿತು ಸರ್ಕಾರದ ಗಮನ ಸೆಳೆದಿದ್ದರು. ಈ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, "ಹೊರರಾಜ್ಯಗಳಿಂದ ಬಂದಿರುವ ವಲಸೆ ಕಾರ್ಮಿಕರಿಂದಾಗಿ ಕನ್ನಡಿಗರಿಗೆ ಅಥವಾ ಸ್ಥಳೀಯರಿಗೆ ಉದ್ಯೋಗವಿಲ್ಲದಂತಾಗಿದೆ ಎಂಬ ಯಾವುದೇ ದೂರುಗಳು ನಮ್ಮ ಇಲಾಖೆಯ ಗಮನಕ್ಕೆ ಬಂದಿಲ್ಲ. ರಾಜ್ಯದ ನಗರ ಪ್ರದೇಶಗಳಾಗಲಿ ಅಥವಾ ಗ್ರಾಮೀಣ ಭಾಗಗಳಲ್ಲಾಗಲಿ ಇಂಥದ್ದೊಂದು ದೂರು ದಾಖಲಾಗಿಲ್ಲ" ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಎಷ್ಟು ವಲಸೆ ಕಾರ್ಮಿಕರಿದ್ದಾರೆ?
ಬೆಂಗಳೂರಿನಂತಹ ಬೃಹತ್ ನಗರದಲ್ಲಿ ಕಟ್ಟಡ ನಿರ್ಮಾಣ, ಹೋಟೆಲ್ ಉದ್ಯಮ, ಗಾರ್ಮೆಂಟ್ಸ್, ಭದ್ರತಾ ಸಿಬ್ಬಂದಿ ಹಾಗೂ ಇನ್ನಿತರ ಅಸಂಘಟಿತ ವಲಯಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ, ಇವರ ನಿಖರ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, "ರಾಜ್ಯದಲ್ಲಿರುವ ವಲಸೆ ಕಾರ್ಮಿಕರ ಕುರಿತು ಈವರೆಗೆ ಯಾವುದೇ ಅಧಿಕೃತ ಸಮೀಕ್ಷೆ ನಡೆಸಿಲ್ಲ. ಹೀಗಾಗಿ ನಿಖರವಾದ ಅಂಕಿ-ಅಂಶಗಳು ಲಭ್ಯವಿಲ್ಲ" ಎಂದಿದ್ದಾರೆ.
ಆದಾಗ್ಯೂ, ಲಭ್ಯವಿರುವ ಕಾಗದಪತ್ರಗಳ ದಾಖಲೆಗಳ ಪ್ರಕಾರ, "ಕಾರ್ಮಿಕ ಆಯುಕ್ತರಿಂದ ಅನುಮತಿ ಪತ್ರಗಳನ್ನು ಪಡೆಯುವಾಗ ಸಂಗ್ರಹಿಸಿದ ಮಾಹಿತಿಯ ಅನ್ವಯ, ಪ್ರಸ್ತುತ ಕರ್ನಾಟಕದಲ್ಲಿ 46,393 ವಲಸೆ ಕಾರ್ಮಿಕರು ಅಧಿಕೃತವಾಗಿ ದಾಖಲಾಗಿದ್ದಾರೆ" ಎಂದು ಸಚಿವರು ವಿವರಿಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಉತ್ತರ ಭಾರತದ ವಿವಿಧ ರಾಜ್ಯಗಳಿಂದ, ಈಶಾನ್ಯ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸುತ್ತಿದ್ದಾರೆ. ಕೇವಲ 46,393 ಕಾರ್ಮಿಕರು ಮಾತ್ರ ಅಧಿಕೃತವಾಗಿ ನೋಂದಣಿಯಾಗಿದ್ದಾರೆ ಎಂಬುದು ವಾಸ್ತವ ಅಂಕಿ-ಅಂಶಗಳಿಗಿಂತ ಬಹಳ ಕಡಿಮೆ ಸಂಖ್ಯೆಯಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಾರ್ಮಿಕ ಇಲಾಖೆಯು ವಲಸೆ ಕಾರ್ಮಿಕರ ಸಮಗ್ರ ಸಮೀಕ್ಷೆ ನಡೆಸುವ ಮೂಲಕ, ಅವರ ನಿಖರ ಸಂಖ್ಯೆ, ಕೆಲಸ ಮಾಡುತ್ತಿರುವ ವಲಯಗಳು ಮತ್ತು ಅವರ ಜೀವನ ಪರಿಸ್ಥಿತಿಗಳ ಬಗ್ಗೆ ಡೇಟಾ ಸಂಗ್ರಹಿಸುವ ಅವಶ್ಯಕತೆ ಇದೆ ಎಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.
ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಮತ್ತು ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕು ಎಂಬ ಹೋರಾಟಗಳ ನಡುವೆಯೇ, ಕಾರ್ಮಿಕ ಇಲಾಖೆಯ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ತಮಗೆ ಉದ್ಯೋಗ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ, ಅಧಿಕೃತವಾಗಿ ಕಾರ್ಮಿಕ ಇಲಾಖೆಯ ಮೆಟ್ಟಿಲೇರಿ ದೂರು ನೀಡುವವರ ಸಂಖ್ಯೆ ತೀರಾ ವಿರಳವಾಗಿದೆ ಎಂಬುದನ್ನು ಈ ಬೆಳವಣಿಗೆ ಸೂಚಿಸುತ್ತದೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್














Click it and Unblock the Notifications