Get Updates
Get notified of breaking news, exclusive insights, and must-see stories!

ಉತ್ತರ ಕರ್ನಾಟಕದ ಯುವಕರಿಗೆ ಗುಡ್‌ನ್ಯೂಸ್, ಈ ಭಾಗದಲ್ಲಿ ಫೆಬ್ರವರಿ 6ಕ್ಕೆ ಉದ್ಯೋಗ ಮೇಳ

ರಾಯಚೂರು: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ಉತ್ತರ ಕರ್ನಾಟಕ ಭಾಗದ ಯುವನಿಧಿ ಫಲಾನುಭವಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ನಿರುದ್ಯೋಗಿ ಯುವಕ - ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಸಚಿವರ ನೇತೃತ್ವದಲ್ಲಿ ಇಲ್ಲಿನ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿನ ದರಬಾರ ಸ್ಕೂಲ್ ಆವರಣದಲ್ಲಿ ಫೆಬ್ರವರಿ 2ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಯುವ ಸಮೃದ್ಧಿ ಹಾಗೂ ಉದ್ಯೋಗ ಮೇಳದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಭಾಗದ ಜಿಲ್ಲೆಗಳ ಅಭ್ಯರ್ಥಿಗಳನ್ನು ಒಳಗೊಂಡಂತೆ ಇತರೆ ಜಿಲ್ಲೆಗಳಿಂದಲೂ ಸಹ ಅಂದಾಜು 20,000ಕ್ಕೂ ಹೆಚ್ಚು ಅಭ್ಯರ್ಥಿಗಳು, 150ಕ್ಕೂ ಹೆಚ್ಚು ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಲಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ನಿರುದ್ಯೋಗ ಯುವಕ/ ಯುವತಿಯರು ವಿಭಾಗೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

North Karnataka Raichur Job Fair on Feb 2 Big Opportunity for Unemployed Youth and Women

ಈ ಉದ್ಯೋಗ ಮೇಳವು ಉದ್ಯೋಗಾಕಾಂಕ್ಷಿಗಳನ್ನು ಹಾಗೂ ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನವಾಗಿದೆ. ಉದ್ಯೋಗದಾತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅವರ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಉದ್ಯೋಗಗಳಿಗೆ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಹಾಗೆಯೇ ಉದ್ಯೋಗಾಕಾಂಕ್ಷಿ ಯುವಕ/ಯುವತಿಯರು ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿರುತ್ತದೆ.

ಈ ಲಿಂಕ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಿ

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳ https://udyogamela.ksdckarnataka.com ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಭಾಗವಹಿಸುವುದಕ್ಕೆ ಅವಕಾಶ ಇರಲಿದೆ. ಅಲ್ಲದೇ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗದಾತರು/ಕಂಪನಿಗಳು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರಗಳೊಂದಿಗೆ https://employer.ksdckarnataka.com/login ಈ ಜಾಲತಾಣದಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 9606494308ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು.ಹುಡೇದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಯಚೂರು ಸೇರಿ ವಿವಿಧ ಜಿಲ್ಲೆಗಳ ನಿರುದ್ಯೋಗಿಗಳಿಗೆ ಅವಕಾಶ

ಇನ್ನು ಈ ಉದ್ಯೋಗ ಮೇಳದಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿರುವ ನಿರುದ್ಯೋಗಿಗಳು ಭಾಗವಹಿಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಇದು ಸುವರ್ಣ ಅವಕಾಶವಾಗಿದೆ. ರಾಯಚೂರು ಹಾಗೂ ರಾಯಚೂರು ಸುತ್ತಮುತ್ತಲಿನ ನಿರುದ್ಯೋಗಿ ಯುವಕ ಮತ್ತು ಯುವತಿಯರಿ ಫೆಬ್ರವರಿ 2ರಂದು ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಲಾಗಿದೆ. ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಸಚಿವರ ನೇತೃತ್ವದಲ್ಲಿ ಈ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+