ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSC Recruitment; ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ

|
Google Oneindia Kannada News

ಬೆಂಗಳೂರು, ಜನವರಿ 20; ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಕನ್ನಡದಲ್ಲಿಯೂ ಅವಕಾಶ ನೀಡಬೇಕು ಎಂಬ ಕನ್ನಡಿಗರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ.

ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್‌ಸಿ) 2023ರ ಏಪ್ರಿಲ್‌ನಲ್ಲಿ ನಡೆಸುವ 11,400 ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಗಳನ್ನು ಬರೆಯಬಹುದು.

KSAT Recruitment 2023 : ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ನೇಮಕಾತಿ, ಅರ್ಜಿ ಹಾಕಿ KSAT Recruitment 2023 : ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ನೇಮಕಾತಿ, ಅರ್ಜಿ ಹಾಕಿ

ಎಸ್‌ಎಸ್‌ಸಿ ನಡೆಸುವ ಪರೀಕ್ಷೆಗಳು ಕನ್ನಡ ಸೇರಿದಂತೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿಯೇ ಇರಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿತ್ತು. ಈಗ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಬೇರೆ-ಬೇರೆ ರಾಜ್ಯಗಳಲ್ಲಿಯೂ ಸಹ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಗುತ್ತಿತ್ತು.

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ

Kannada

ಇದೇ ಮೊದಲ ಬಾರಿಗೆ ಇಂಗ್ಲಿಶ್, ಹಿಂದಿ, ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಸ್‌ಎಸ್‌ಸಿ ಮುಂದಾಗಿದೆ. ಇಷ್ಟು ದಿನ ಇಂಗ್ಲಿಶ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿತ್ತು. ಇದರಿಂದಾಗಿ ನೂರಾರು ಅಭ್ಯರ್ಥಿಗಳಿಗೆ ಹಿನ್ನಡೆ ಉಂಟಾಗಿತ್ತು.

KPSC Recruitment; ಅಂಗವಿಕಲರ ವಿಶೇಷ ಗುರುತಿನ ಚೀಟಿ ಪರಿಗಣನೆ ಆದೇಶ KPSC Recruitment; ಅಂಗವಿಕಲರ ವಿಶೇಷ ಗುರುತಿನ ಚೀಟಿ ಪರಿಗಣನೆ ಆದೇಶ

ಈಗ ಹೊರಡಿಸಿರುವ ಆದೇಶದಿಂದ ಏಪ್ರಿಲ್‌ನಲ್ಲಿ ಎಸ್‌ಎಸ್‌ಸಿ ನಡೆಸುವ 10,880 ಎಟಿಎಸ್ ಹುದ್ದೆ, 529 ಸಿಬಿಐಸಿ-ಸಿಬಿಎನ್ ಹವಾಲ್ದಾರ್ ಪರೀಕ್ಷೆಗಳನ್ನು ಅಭ್ಯರ್ಥಿಗಳು ಕನ್ನಡದಲ್ಲಿ ಬರೆಯಬಹುದಾಗಿದೆ.

ಕರ್ನಾಟಕದಲ್ಲಿ ದೊಡ್ಡ ಹೋರಾಟ; ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯನ್ನು ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್‌ಸಿ) ನಡೆಸುತ್ತದೆ. ಇಷ್ಟು ದಿನ ಇಂಗ್ಲಿಶ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿತ್ತು. ಇದರಿಂದಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಬೃಹತ್ ಹೋರಾಟ ನಡೆದಿತ್ತು.

ಕನ್ನಡ ಪರ ಹೋರಾಟಗಾರರು, ಲೇಖಕರು, ಸಾಹಿತಿಗಳು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಿವಿಧ ಸಂಸದರು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್‌ ಕೆಲವು ದಿನಗಳ ಹಿಂದೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿತ್ತು. ಈಗ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದರಿಂದ ಕನ್ನಡಿಗರ ಹೋರಾಟಕ್ಕೆ ಜಯಸಿಕ್ಕಿದೆ.

exam

ಏಪ್ರಿಲ್‌ನಲ್ಲಿ ಪರೀಕ್ಷೆಗಳು; ಪ್ರಸ್ತುತ ಎಸ್‌ಎಸ್‌ಇ ಎಂಟಿಎಸ್ ಮತ್ತು ಹವಾಲ್ದಾರ್‌ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 11,409 ಹುದ್ದೆಗಳಿದ್ದು, ಆಸಕ್ತರು ಫೆಬ್ರವರಿ 17ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಶುಲ್ಕ ಪಾವತಿಗೆ ಫೆಬ್ರವರಿ 19 ಕೊನೆಯ ದಿನ. ಅರ್ಜಿ ತಿದ್ದುಪಡಿಗೆ ಫೆಬ್ರವರಿ 23 ಮತ್ತು 24ರಂದು ಅವವಾಶವಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಏಪ್ರಿಲ್‌ನಲ್ಲಿ ನಡೆಯಲಿದೆ.

ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷೆಗಳು ನಡೆಯಲಿದೆ. ಈ ಹುದ್ದೆಗಳಿಗೆ 5,200 ರಿಂದ 20,200ರ ತನಕ ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಈ ಪರೀಕ್ಷೆಗಳಲ್ಲಿ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ಇರುತ್ತದೆ. ಟಯರ್ - 1 ಕಂಪ್ಯೂಟರ್ ಆಧಾರಿತ ಪರೀಕ್ಷೆ ವಸ್ತುನಿಷ್ಠ ಬಹುಮಾದರಿ ಪ್ರಶ್ನೆಗಳನ್ನು ಹೊಂದಿರುತ್ತದೆ. ಈ ಪತ್ರಿಕೆ ಹಿಂದಿ, ಇಂಗ್ಲಿಶ್‌ನಲ್ಲಿ ಇರುತ್ತದೆ. ತಲಾ 25 ಅಂಕಗಳಿಗೆ ಉತ್ತರಿಸಲು ಒಂದೂವರೆ ಗಂಟೆ ಸಮಯವಿದೆ.

ಟಯರ್-2 ಪರೀಕ್ಷೆಗೆ ವಿವರಣಾತ್ಮಕ ಅಥವ ಪ್ರಬಂಧ ಮಾದರಿಯಲ್ಲಿ ಉತ್ತರ ನೀಡಬೇಕು. 50 ಅಂಕಗಳ ಪ್ರಶ್ನೆಗಳಿಗೆ ಉತ್ತರಿಸಲು 45 ನಿಮಿಷದ ಅವಕಾಶವಿದೆ. ಈ ಪತ್ರಿಕೆಗೆ ಹಿಂದಿ, ಇಂಗ್ಲಿಶ್, ಕೊಂಕಣಿ, ಕನ್ನಡ ಸೇರಿದಂತೆ 15 ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದಾಗಿದೆ.

English summary
Union government now allowed to write exam of Staff Selection Commission (SSC) recruitment in Kannada and 12 other regional languages. For the first time exam allowed in regional languages.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X