ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಎನ್‌ಪಿಸಿಐಎಲ್

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 27 : ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾದಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮೇ 15, 2016 ಕೊನೆ ದಿನ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ ದಿನಾಂಕ 15/05/2016ಕ್ಕೆ 21 ರಿಂದ 26 ವರ್ಷದೊಳಗಿರಬೇಕು. ಬಿ.ಇ./ಬಿ.ಟೆಕ್./ಬಿ.ಎಸ್ಸಿ (ಇಂಜಿನಿಯರಿಂಗ್) ವಿದ್ಯಾರ್ಹತೆ ಹೊಂದಿರಬೇಕು. [ಏಪ್ರಿಲ್‌ 30ರಂದು ರಾಮನಗರದಲ್ಲಿ ಉದ್ಯೋಗ ಮೇಳ]

jobs

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪೈಕಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಕೇಂದ್ರ) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಹೆಚ್ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. [555 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಅರಣ್ಯ ಇಲಾಖೆ]

www.npcilonline.co.in ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 15, 2016 ರ ಸಂಜೆ 5 ಗಂಟೆ ಕೊನೆಯ ದಿನ. [KPSC ನೇಮಕಾತಿ, ಅರ್ಜಿ ಸಲ್ಲಿಕೆಗೆ ಮೇ 5 ಕೊನೆ ದಿನ]

ಹೆಚ್ಚಿನ ಮಾಹಿತಿಗಾಗಿ : ಉಪಮುಖ್ಯಸ್ಥರು, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ , ಮೈಸೂರು ಇವರನ್ನು ಸಂಪರ್ಕಿಸಬಹುದು.

ಉದ್ಯೋಗವಕಾಶಗಳು

* ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಜಿಲ್ಲಾ ಕೇಂದ್ರಗಳಲ್ಲಿ ಸ್ಟ್ರಿಂಜರ್‌ಗಳಾಗಿ ಕಾರ್ಯನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೇ 13, 2016 ಅರ್ಜಿ ಸಲ್ಲಿಸಲು ಕೊನೆಯ ದಿನ. [ದೂರದರ್ಶನ ಕೇಂದ್ರದಲ್ಲಿ ಕೆಲಸ ಖಾಲಿ ಇದೆ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Nuclear Power Corporation of India limited invited application for Executive Trainees post. May 15, 2016 last date for submitting application.
Please Wait while comments are loading...