200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್‌ಪಿಸಿಐಎಲ್
ಬೆಂಗಳೂರು, ಏಪ್ರಿಲ್ 06 : ಎನ್‌ಪಿಸಿಐಎಲ್ 200 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) 200 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ವೇತನ ಶ್ರೇಣಿ 35,000 ರೂ.ಗಳು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್/ಬಿ.ಎಸ್.ಸಿ (ಇಂಜಿನಿಯರಿಂಗ್)/5 ವರ್ಷದ ಎಂ.ಟೆಕ್ ಅನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 18/4/2018ಕ್ಕೆ ಅನ್ವಯವಾಗುವಂತೆ.

ಉದ್ಯೋಗದ ಸ್ಥಳ : ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಕರ್ನಾಟಕ (ಕೈಗಾ). ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ಅಂಶಗಳು
* ಎನ್‌ಪಿಸಿಐಎಲ್‌ನಲ್ಲಿ ಉದ್ಯೋಗ
* ಒಟ್ಟು 200 ಹುದ್ದೆಗಳು
* ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆ
ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.












Click it and Unblock the Notifications