22 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್‌ಪಿಸಿಐಎಲ್

ಬೆಂಗಳೂರು, ಅಕ್ಟೋಬರ್ 29 : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ 22 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 12, 2018 ಕೊನೆಯ ದಿನವಾಗಿದೆ.

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ಅಸಿಸ್ಟೆಂಟ್ ಜಿಆರ್ 1 (ಎಚ್ಆರ್), ಅಸಿಸ್ಟೆಂಟ್ ಜಿಆರ್ 1 (ಎಫ್‌&ಎ) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಒಟ್ಟು 22 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಲಿಲ್ಲ.

ಆನ್‌ಲೈನ್ ಮೂಲಕ ಮಾತ್ರ ನವೆಂಬರ್ 12, 2018ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ....

ವಿದ್ಯಾರ್ಹತೆಯ ವಿವರ

ವಿದ್ಯಾರ್ಹತೆಯ ವಿವರ

ಅಸಿಸ್ಟೆಂಟ್ ಜಿಆರ್ 1 (ಎಚ್ಆರ್) ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕಲಾ, ವಾಣಿಜ್ಯ ಅಥವ ವಿಜ್ಞಾನ ವಿಷಯದಲ್ಲಿ ಪದವಿಯನ್ನು ಶೇ 50 ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

ಅಸಿಸ್ಟೆಂಟ್ ಜಿಆರ್ 1 (ಎಫ್‌&ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಾಣಿಜ್ಯ ವಿಷಯದಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ವಯೋಮಿತಿಯ ವಿವರ

ವಯೋಮಿತಿಯ ವಿವರ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು 21 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 12 ನವೆಂಬರ್ 2018ಕ್ಕೆ ಅನ್ವಯವಾಗುವಂತೆ.

ತಿಂಗಳ ವೇತನ ಎಷ್ಟು?
ವೇತನ ಶ್ರೇಣಿಯ ಮಾಹಿತಿ
ಅಸಿಸ್ಟೆಂಟ್ ಜಿಆರ್ 1 (ಎಚ್ಆರ್) ಮತ್ತು ಅಸಿಸ್ಟೆಂಟ್ ಜಿಆರ್ 1 (ಎಫ್‌&ಎ) ಹುದ್ದೆಗಳಿಗೆ 25500 ರೂ. ಪ್ರತಿ ತಿಂಗಳ ವೇತನ ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.

ಅಭ್ಯರ್ಥಿ ಆಯ್ಕೆ ಹೇಗೆ

ಅಭ್ಯರ್ಥಿ ಆಯ್ಕೆ ಹೇಗೆ

ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ 12 ನವೆಂಬರ್ 2018ರೊಳಗೆ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿಯ ಮಾಹಿತಿ

ವೇತನ ಶ್ರೇಣಿಯ ಮಾಹಿತಿ

ಅಸಿಸ್ಟೆಂಟ್ ಜಿಆರ್ 1 (ಎಚ್ಆರ್) ಮತ್ತು ಅಸಿಸ್ಟೆಂಟ್ ಜಿಆರ್ 1 (ಎಫ್‌&ಎ) ಹುದ್ದೆಗಳಿಗೆ 25500 ರೂ. ಪ್ರತಿ ತಿಂಗಳ ವೇತನ ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+