NPCIL ನೇಮಕಾತಿ 2021: 200 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 23: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL)2021ನೇ ನೇಮಕಾತಿ ಆರಂಭಿಸಿದೆ ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸುಮಾರು 200ಕ್ಕೂ ಅಧಿಕ ಎಕ್ಸಿಕ್ಯೂಟಿವ್ ಹುದ್ದೆಗಳಿದ್ದು, ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 9,2021ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಸಂಸ್ಥೆ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್)
ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆ
ಒಟ್ಟು ಹುದ್ದೆ: 200
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 9, 2021.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ/ಬಿ.ಟೆಕ್/ಬಿ.ಎಸ್.ಸಿ (ಇಂಜಿನಿಯರಿಂಗ್)/5 ವರ್ಷದ ಎಂ.ಟೆಕ್ ಅನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 41 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 02/4/2020ಕ್ಕೆ ಅನ್ವಯವಾಗುವಂತೆ.
ರಿಯಾಯಿತಿ:
ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳು: 3 ವರ್ಷ
ಎಸ್ ಸಿ, ಎಸ್ಟಿ ಅಭ್ಯರ್ಥಿ: 5 ವರ್ಷ
ದಿವ್ಯಾಂಗ ಅಭ್ಯರ್ಥಿ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಮಾಜಿ ಯೋಧ, ಒಬಿಸಿ ಪುರುಷ ಅಭ್ಯರ್ಥಿ: 500 ರು
ಎಸ್ ಸಿ/ ಎಸ್ಟಿ/ ದಿವ್ಯಾಂಗ/ಮಾಜಿ ಯೋಧ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ನೇಮಕಾತಿ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23/02/2021.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09/03/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ