NPCIL Recruitment 2022: ಎನ್‌ಸಿಪಿಎಲ್ ನೇಮಕಾತಿ; 200 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಏಪ್ರಿಲ್ 14; ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ಎಕ್ಸಿಕ್ಯುಟೀವ್ ಟ್ರೈನಿ ಹುದ್ದೆಗಾಗಿ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಏಪ್ರಿಲ್ 28 ಕೊನೆಯ ದಿನವಾಗಿದೆ.

ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಮೆಕಾನಿಕಲ್, ಕಮರ್ಷಿಯಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್ ಕೋರ್ಸ್‌ನವರು ಅರ್ಜಿ ಸಲ್ಲಿಸಬೇಕಾಗಿದೆ.

ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳನ್ನು ಜಿಎಟಿಇ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 2020/ 2021/ 2022ರ ಜಿಎಟಿಇ ಪರೀಕ್ಷೆಗಳ ಅಂಕಗಳ ಆಧಾರದ ಮೇಲೆ ವೈಯಕ್ತಿಕ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ.

NPCIL Recruitment 2022 Apply For Executive Trainee Post

ಅರ್ಜಿ ಸಲ್ಲಿಸುವವರು 2020/ 20201/ 2022ರ ಜಿಎಟಿಇ ಪರೀಕ್ಷೆಯಲ್ಲಿ ಅಗತ್ಯ ಅಂಕಗಳನ್ನು ಪಡೆದ ಬಗ್ಗೆ ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಬೇಕು.

ಖಾಲಿ ಇರುವ ಹುದ್ದೆಗಳಲ್ಲಿ 63 ಒಬಿಸಿ, 21 ಆರ್ಥಿಕವಾಗಿ ಹಿಂದುಳಿದವರು, 34 ಪರಿಶಿಷ್ಟ ಜಾತಿ, 19 ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದೆ. ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ/ ಒಬಿಸಿ ವರ್ಗಕ್ಕೆ ಸೇರಿದ ಪುರುಷ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಇದನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡುವುದಿಲ್ಲ. ಅರ್ಜಿ ಶುಲ್ಕದ ಜೊತೆ ಬ್ಯಾಂಕ್ ಶುಲ್ಕವನ್ನು ಸಹ ಪಾವತಿಸಬೇಕು.

ಎಸ್‌ಸಿ/ ಎಸ್‌ಟಿ/ ಅಂಗವಿಕಲ/ ನಿವೃತ್ತ ಯೋಧ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 28ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಸಂದರ್ಶನವನ್ನು ಜೂನ್ 13 ರಿಂದ 25 ರ ತನಕ ನಡೆಸಲಾಗುತ್ತದೆ ಎಂದು ಕರಡು ದಿನಾಂಕವನ್ನು ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಎನ್‌ಸಿಪಿಎಲ್ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಕೊಪ್ಪಳದಲ್ಲಿ ನೇರ ಸಂದರ್ಶನ; ಹೊಸಪೇಟೆಯ ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಏಪ್ರಿಲ್ 19 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 20 ರಿಂದ 28 ವರ್ಷದೊಳಗಿನ ಪಿಯುಸಿ, ಐಟಿಐ, ಯಾವುದೇ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಪುರುಷರು ಅಭ್ಯರ್ಥಿಗಳು ಮಾತ್ರ ಸಂದರ್ಶನಕ್ಕೆ ಹಾಜರಾಗಬಹುದು.

ನೇರ ಸಂದರ್ಶನಕ್ಕೆ ಬರುವಾಗ ದ್ವಿ-ಚಕ್ರ ವಾಹನದ ಲೈಸೆನ್ಸ್ ಮತ್ತು ಪಾನ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7208063971, 9321943757ಗೆ ಕರೆ ಮಾಡಬಹುದಾಗಿದೆ.

ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ; ಕೇಂದ್ರ ಸರ್ಕಾರದಿಂದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ 'ಸಖಿ' ಒನ್ ಸ್ಟಾಪ್ ಕೇಂದ್ರಕ್ಕೆ ಸರ್ಕಾರದ ಮಾರ್ಗಸೂಚಿಯಂತೆ ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರು/ ಪ್ಯಾರಾಲೀಗಲ್ ಪರ್ಸನಲ್ 2 ಹುದ್ದೆ(ಮಹಿಳಾ ಅಭ್ಯರ್ಥಿಗಳಿಗೆ ಮೀಸಲು) ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವವರು ಕಾನೂನು ಪದವೀಧರರಾಗಿರಬೇಕು. ಸರ್ಕಾರಿ, ಸರ್ಕಾರೇತರ ಯೋಜನೆ, ಕಾರ್ಯಕ್ರಮಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂಬಂಧಿಸಿದಂತೆ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಮತ್ತು ಕಂಪ್ಯೂಟರ್ ತರಬೇತಿ ಕಡ್ಡಾಯವಾಗಿದೆ. ಆಯ್ಕೆಯಾದವರಿಗೆ ಮಾಸಿಕ 25,000 ರೂ. ಗೌರವಧನ ನೀಡಲಾಗುತ್ತದೆ.

'ಸಖಿ' ಒನ್ ಸ್ಟಾಪ್ ಸೆಂಟರ್‌ಗೆ ಆಯ್ಕೆಯಾಗುವ ಕಾನೂನು ಸಲಹೆಗಾರರು 24*7 ಕಾರ್ಯನಿರ್ವಹಿಸಲು ಅನುವಾಗುವಂತೆ ಹಗಲು ಮತ್ತು ರಾತ್ರಿ ಪಾಳಿಯದಲ್ಲಿ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು. ಈ ನೇಮಕಾತಿಯು 11 ತಿಂಗಳ ಅವಧಿಯದಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ನವೀಕರಿಸಲಾಗುವುದು.

ಅರ್ಹ ಅಭ್ಯರ್ಥಿಗಳು ಸ್ವಯಂ ದೃಡೀಕರಿಸಿದ ಸ್ವ-ವಿವರಗಳುಳ್ಳ ಅರ್ಜಿಯೊಂದಿಗೆ ಅಂಕಪಟ್ಟಿಗಳು ಮತ್ತು ಅನುಭವ ಪ್ರಮಾಣ ಪತ್ರಗಳನ್ನು ಏಪ್ರಿಲ್ 26 ರೊಳಗೆ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-298379 ಅನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+