NRDRM Recruitment 2025: 13,762 ಹುದ್ದೆಗಳಿಗೆ ಅರ್ಜಿ ಆಹ್ವಾನ
NRDRM Recruitment 2025: ಇತ್ತೀಚಿನ ದಿನಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಮನರಂಜನಾ ಮಿಷನ್ ಖಾಲಿ ಇರುವ 13,762 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಹಾಗಾದರೆ ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಮನರಂಜನಾ ಮಿಷನ್ ಕಂಪ್ಯೂಟರ್ ಆಪರೇಟರ್‌ಗಳು, ಕ್ಷೇತ್ರ ಸಂಯೋಜಕರು, ಎಂಐಎಸ್ ಸಹಾಯಕರು ಮತ್ತು ಮಲ್ಟಿ-ಟಾಸ್ಕಿಂಗ್ ಅಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಒಟ್ಟು 13,762 ಹುದ್ದೆಗಳು ಖಾಲಿಯಿವೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://nrdrm.com/ಗೆ ಭೇಟಿ ನೀಡಿ ಲಭ್ಯವಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಫೆಬ್ರವರಿ 5, 2025ರಂದು ಆರಂಭವಾಗಿದ್ದು, ಫೆಬ್ರವರಿ 24, 2025 ಕೊನೇ ದಿನಾಂಕವಾಗಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳನ್ನು ಪೂರೈಸಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ. ಎನ್‌ಆರ್‌ಡಿಆರ್‌ಎಂ ನೇಮಕಾತಿ 2025ರ ಎಲ್ಲಾ ವಿವರಗಳನ್ನು ನೇರ ಅರ್ಜಿಯನ್ನು ಆನ್‌ಲೈನ್ ಲಿಂಕ್ನೊಂದಿಗೆ ಪಡೆಯಬಹುದಾಗಿದೆ.
ಎನ್‌ಆರ್‌ಡಿಆರ್‌ಎಂ ನೇಮಕಾತಿ 2025ರ ಅಧಿಸೂಚನೆಯನ್ನ ಫೆಬ್ರವರಿ 3, 2025ರಂದು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಇದು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿವಿಧ ಹುದ್ದೆಗಳಲ್ಲಿ ಖಾಲಿ ಇರುವ 13,762 ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ವಿವರಗಳನ್ನು ಒಳಗೊಂಡಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಗಳೊಂದಿಗೆ ಮುಂದುವರೆಯುವ ಮೊದಲು ಅಧಿಸೂಚನೆಯನ್ನ ಗಮನಿಸಿ.
10 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೊಡಗು ಜಿಲ್ಲೆಯ ಈ ಭಾಗಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವೀಚಾರಕರ ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎಂದು ಇಲ್ಲಿ ತಿಳಿಯಿರಿ.
ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಮಾಡುವ ಬಗ್ಗೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲೆಯ ಬೇರೆ-ಬೇರೆ ತಾಲೂಕುಗಳಲ್ಲಿ ಈ ಉದ್ಯೋಗಗಳು ಖಾಯಿಯಿವೆ. ಸದ್ಯ ಇವುಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ ಫೆಬ್ರುವರಿ 13, 2025 ಆಗಿದೆ.
ವಿರಾಜಪೇಟೆ-ಚೆಂಬೆಬೆಳ್ಳೂರು, ಚೆನ್ನಯ್ಯನ ಕೋಟೆ, ಆರ್ಜಿ, ಪೊನ್ನಂಪೇಟೆ-ಬಾಳೆಲೆ, ಕುಟ್ಟ, ಗೋಣಿಕೊಪ್ಪ, ಕೆ.ಬಾಡಗ, ಸೋಮವಾರಪೇಟೆ-ಶನಿವಾರ ಸಂತೆ, ನಿಡ್ತ, ಕುಶಾಲನಗರ-ಶಿರಂಗಾಲ ಇಲ್ಲಿರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ವೇತನ ಎಷ್ಟು?: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,606 ರೂಪಾಯಿ ಇರಲಿದೆ. ವಿದ್ಯಾರ್ಹತೆ ವಿಚಾರಕ್ಕೆ ಬಂದರೆ, ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಲ್ಲಿ 3 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು.
ವಯೋಮಿತಿ ವಿವರ: ಒಂದು ವೇಳೆ ಇಬ್ಬರು ಸಮನವಾದ ಅಂಕ ಹೊಂದಿದ್ದರೇ ವಯಸ್ಸಿನಲ್ಲಿ ಹಿರಿಯರನ್ನು ಪರಿಗಣಿಸಲಾಗುತ್ತದೆ. ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಯಸುವವರು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಆಗಿರಬೇಕು. ವಯಸ್ಸಿನ ಮಿತಿ 18 ರಿಂದ 40 ವರ್ಷಗಳು. ಅರ್ಜಿ ಸಲ್ಲಿಕೆಗೆ https://www.kodagu.nic.in ಗೆ ಭೇಟಿ ನೀಡಬೇಕು.












Click it and Unblock the Notifications