ಇಸ್ರೊ ಅಂಗ ಸಂಸ್ಥೆ ಎನ್ ಆರ್ ಎಸ್ ಸಿಯಲ್ಲಿ ವಿವಿಧ ಉದ್ಯೋಗಾವಕಾಶಗಳು
ಬೆಂಗಳೂರು, ಮೇ 24 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ಎನ್ ಆರ್ ಎಸ್ ಸಿ) ವೈಜ್ಞಾನಿಕ ಸಹಾಯಕ (Scientific Assistant) ಮತ್ತು ತಂತ್ರಜ್ಞ (Technician) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
56 ವೈಜ್ಞಾನಿಕ ಸಹಾಯಕ (Scientific Assistant) ಮತ್ತು ತಂತ್ರಜ್ಞ (Technician) ಒಟ್ಟು 74 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಆಸಕ್ತ ಮತ್ತು ಅರ್ಹರು ನಿಗದಿತ ದಿನಾಂಕ ಜೂನ್ 10ರೊಳಗೆ NRSC ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.[ಎಚ್ಎಂಟಿಯಲ್ಲಿ ಮ್ಯಾನೇಜರ್ ಹುದ್ದೆ ಖಾಲಿ, ಕೂಡಲೆ ಅರ್ಜಿ ಹಾಕಿ]

ವೇತನ: 44900 ರು. ತಿಂಗಳಿಗೆ.
ವಯೋಮಿತಿ: 10/06/2017ಕ್ಕೆ ಅನ್ವಯವಾಗುವಂತೆ 18ರಿಂದ 35 ವರ್ಷದೊಳಗಿರಬೇಕು.
ವಿದ್ಯಾರ್ಹತೆ: * ವೈಜ್ಞಾನಿಕ ಸಹಾಯಕ (Scientific Assistant) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಗಳಲ್ಲಿ ಬಿಎಸ್ ಸಿಯಲ್ಲಿ ಗಣಿತ, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
* ತಂತ್ರಜ್ಞ (Technician) ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಜತೆಗೆ ITI/NTC/NAC ಟ್ರೇಡ್ ಮುಗಿಸರಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಗಳಿಸಿದ ಅಂಕ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ












Click it and Unblock the Notifications