ಎನ್‌ಟಿಪಿಸಿಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ
ಬೆಂಗಳೂರು, ಜೂನ್ 17 : ಎನ್‌ಟಿಪಿಸಿ ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 6/7/2020 ಕೊನೆಯ ದಿನವಾಗಿದೆ.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಗೇಟ್ 2020ರ ಅಂಕಗಳನ್ನು ಪರಿಗಣಿಸಿ ನೇಮಕಾತಿ ಮಾಡಲಾಗುತ್ತದೆ.
ಎಲೆಕ್ಟ್ರಿಕಲ್ 30, ಮೆಕಾನಿಕಲ್ 45, ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್ 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಜೂನ್ 16 ರಿಂದ ಜುಲೈ 6ರ ತನಕ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಹಾಕಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವರ್ಗಾವಾರು ಮೀಸಲಾತಿ ನಿಯಮ ಅನ್ವಯವಾಗಲಿದ್ದು, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 50 ರಿಂದ 160000 ರೂ. ತಿಂಗಳ ವೇತನ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೆಹಲಿಯಲ್ಲಿರುವ ಎನ್‌ಟಿಪಿಸಿ ಭವನ್‌ನಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು.
ಅರ್ಜಿಗಳನ್ನು ಸಲ್ಲಿಸಲು, ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications