ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

164 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಎನ್‌ಟಿಪಿಸಿ

|
Google Oneindia Kannada News

ಬೆಂಗಳೂರು, ಮೇ 04 : ಎನ್‌ಟಿಪಿಸಿ 164 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 16ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮ (ಎನ್ ಟಿಪಿಸಿ) 47 ಎಕ್ಸಿಕ್ಯೂಟೀವ್ ಟ್ರೈನಿ, 47 ಅಸೋಸಿಯೇಟ್ (ಅಕೌಂಟ್ಸ್) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

1032 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಒಎನ್‌ಜಿಸಿ1032 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಒಎನ್‌ಜಿಸಿ

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಎಕ್ಸಿಕ್ಯುಟೀವ್ ಟ್ರೈನಿ ಹುದ್ದೆಗೆ 24-900 ರಿಂದ 50500, ಅಸೋಸಿಯೇಟ್ (ಅಕೌಂಟ್ಸ್) ಹುದ್ದೆಗೆ 44000 ರೂ. ವೇತನವನ್ನು ನಿಗದಿ ಮಾಡಲಾಗಿದೆ.

NTPC recruitment 2018 : Apply for 164 Various Vacancies

ಎಕ್ಸಿಕ್ಯೂಟೀವ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ ಅಥವ ICWA/CMA ಕೋರ್ಸ್ ಪೂರ್ಣಗೊಳಿಸಿರಬೇಕು. ಅಸೋಸಿಯೇಟ್ (ಅಕೌಂಟ್ಸ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ ಅಥವ ICWA/CMA ಕೋರ್ಸ್ ಪೂರ್ಣಗೊಳಿಸಿರಬೇಕು.

ಎಕ್ಸಿಕ್ಯೂಟೀವ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 29 ವರ್ಷ. ಅಸೋಸಿಯೇಟ್ (ಅಕೌಂಟ್ಸ್) ಹುದ್ದೆಗೆ 27 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಬೇರೆ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
National Thermal Power Corporation Limited (NTPC) issued notification for 164 vacancies. for Executive Trainees (Finance), 47 (forty seven) for Associate (Accounts) & Various Vacancies. Job seekers should apply from 25th April 2018 and before 16th May 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X