203 ಇಂಜಿನಿಯರ್ ಹುದ್ದೆಗೆ ಅರ್ಜಿ ಕರೆದ ಎನ್‌ಟಿಪಿಸಿ

ಬೆಂಗಳೂರು, ಆಗಸ್ಟ್ 12 : ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 26/8/2019 ಕೊನೆಯ ದಿನವಾಗಿದೆ.

ಎನ್‌ಟಿಪಿಸಿ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು ಆನ್‌ಲೈನ್ ಮೂಲಕ ಮಾತ್ರ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್, ಮೆಕಾನಿಕಲ್, ಎಲೆಕ್ಟ್ರಾನಿಕ್ಸ್, Instrumentation ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

NTPC Recruitment 2019 : Apply For 203 Engineer Vacancies

ಆಯ್ಕೆಯಾದ ಅಭ್ಯರ್ಥಿಗಳಿಗೆ 50000-160000 ಪ್ರತಿ ತಿಂಗಳ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 300 ರೂ. ಶುಲ್ಕ ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+