ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

203 ಇಂಜಿನಿಯರ್ ಹುದ್ದೆಗೆ ಅರ್ಜಿ ಕರೆದ ಎನ್‌ಟಿಪಿಸಿ

|
Google Oneindia Kannada News

ಬೆಂಗಳೂರು, ಆಗಸ್ಟ್ 12 : ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 26/8/2019 ಕೊನೆಯ ದಿನವಾಗಿದೆ.

ಎನ್‌ಟಿಪಿಸಿ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು ಆನ್‌ಲೈನ್ ಮೂಲಕ ಮಾತ್ರ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಐಬಿಪಿಎಸ್ ನೇಮಕಾತಿ: 4336 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿವೆಐಬಿಪಿಎಸ್ ನೇಮಕಾತಿ: 4336 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿವೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್, ಮೆಕಾನಿಕಲ್, ಎಲೆಕ್ಟ್ರಾನಿಕ್ಸ್, Instrumentation ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಧಾರವಾಡ : 22 ಗ್ರಾಮ ಲೆಕ್ಕಿಗ ಹುದ್ದೆಗೆಗಳಿಗೆ ಅರ್ಜಿ ಹಾಕಿಧಾರವಾಡ : 22 ಗ್ರಾಮ ಲೆಕ್ಕಿಗ ಹುದ್ದೆಗೆಗಳಿಗೆ ಅರ್ಜಿ ಹಾಕಿ

NTPC Recruitment 2019 : Apply For 203 Engineer Vacancies

ಆಯ್ಕೆಯಾದ ಅಭ್ಯರ್ಥಿಗಳಿಗೆ 50000-160000 ಪ್ರತಿ ತಿಂಗಳ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಯುಪಿಎಸ್‌ಸಿ ನೇಮಕಾತಿ: 415 ಹುದ್ದೆಗಳಿಗೆ ಅರ್ಜಿ ಆಹ್ವಾನಯುಪಿಎಸ್‌ಸಿ ನೇಮಕಾತಿ: 415 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 300 ರೂ. ಶುಲ್ಕ ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
National Thermal Power Corporation Limited (NTPC) recruitment 2019. A notification has been released on official website for 203 post. The candidate who is looking for Engineer post can apply online 26-08-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X