NTPC ನೇಮಕಾತಿ 2022: 26 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ನವೆಂಬರ್ 23: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ) 2022ನೇ ಸಾಲಿನ ನೇಮಕಾತಿ ಆರಂಭಿಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಸಹಾಯಕ ಇಂಜಿನಿಯರ್, ಸಹಾಯಕ ಕೆಮಿಸ್ಟ್ ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನವೆಂಬರ್ 30, 2022ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ)
ಹುದ್ದೆ ಹೆಸರು: Assistant Engineer, Assistant Chemist
ಒಟ್ಟು ಹುದ್ದೆಗಳು: 26
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 30, 2022
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್ ಇಂಜಿನಿಯರಿಂಗ್ ಪದವಿ.

ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ.
ರಿಯಾಯಿತಿ:
ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್ ಸಿ, ಎಸ್ಟಿ ಅಭ್ಯರ್ಥಿ: 5 ವರ್ಷ
ದಿವ್ಯಾಂಗ: 10 ವರ್ಷ
ಅರ್ಜಿಶುಲ್ಕ
ಸಾಮಾನ್ಯ/ ಒಬಿಸಿ/ ಆರ್ಥಿಕವಾಗಿ ದುರ್ಬಲ ವರ್ಗ: 300 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಾಕ್ ಆನ್ ಲೈನ್ ಪಾವತಿ ಅಥವಾ ಎಸ್ ಬಿ ಐ ಕಲೆಕ್ಟ್
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/11/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30/11/2022
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications