NTPC Recruitment 2023: ಸರ್ಕಾರಿ 50 ಹುದ್ದೆಗಳು ಖಾಲಿ ಇವೆ, ವೇತನ, ಆಯ್ಕೆ ವಿವರ, ಕೂಡಲೇ ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 07: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಸಂಸ್ಥೆ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಕೂಡಲೇ ಅರ್ಜಿ ಸಲ್ಲಿಸಬೇಕು.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ಒಟ್ಟು 50 ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಅಭ್ಯರ್ಥಿಗಳು ನವೆಂಬರ್ 10ರೊಳಗಾಗಿ ಆನ್‌ಲೈನ್ ಮೂಲಕವೇ ಸೂಕ್ತ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಬೇಕು ಎಂದು ಸಂಸ್ಥೆ ತಿಳಿಸಿದೆ. ಅದಕ್ಕು ಮೊದಲು ನೇಮಕಾತಿ, ವಿದ್ಯಾರ್ಹತೆ, ಆಯ್ಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಇಲ್ಲಿ ತಿಳಿದುಕೊಳ್ಳಿ.

NTPC Recruitment 2023: NTPC Invite Application From Eligibels For 50 Vacants posts

ನೇಮಕಾತಿ ಪೂರ್ಣ ಮಾಹಿತಿ

ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿ.(NTPC)

ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಹುದ್ದೆಗಳು

ಖಾಲಿ ಹುದ್ದೆ ಸಂಖ್ಯೆ: ಒಟ್ಟು 50

ಮಾಸಿಕ ವೇತನ: 90,000 ರೂಪಾಯಿ

ಉದ್ಯೋಗದ ಸ್ಥಳ: ಭಾರತ

ಅರ್ಜಿ ಸಲ್ಲಿಕೆ ಕಡೆಯ ದಿನಾಂಕ: ಇದೇ ನವೆಂಬರ್ 10

ಶೈಕ್ಷಣಿಕ ಅರ್ಹತೆ

ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಇಇಇ/ಇಸಿಇ/ಮೆಕ್ಯಾನಿಕಲ್/ಇನ್​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು ಎಂದು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ವಿವರ

ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ನಿಗದಿ ಮಾಡಲಾಗಿದೆ. ಮೀಸಲಾತಿ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.

NTPC Recruitment 2023: NTPC Invite Application From Eligibels For 50 Vacants posts

ಅರ್ಜಿ ಶುಲ್ಕ ಮಾಹಿತಿ

ಪರಿಶಿಷ್ಟ ಜಾತಿ-ಪಂಗಡ/XSM/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ. ಉಳಿದಂತೆ

ಸಾಮಾನ್ಯ/ಹಿಂದುಳಿದ ವರ್ಗ/EWS ಅಭ್ಯರ್ಥಿಗಳು ಅರ್ಜಿ ಶುಲ್ಕ 300 ರೂಪಾಯಿ ನಿಗದಿ ಮಾಡಿದ್ದು, ಈ ಹಣವನ್ನು ಆನ್​​ಲೈನ್ ಇಲ್ಲವೇ ಆಫ್​ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪನಿಯು ಮೊದಲು ಲಿಖಿತ ಪರೀಕ್ಷೆ ನಡೆಸಲಿದೆ. ಅಲ್ಲಿ ಆಯ್ಕೆ ಆಗುವವರಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಿದೆ ಎಂದು ಅಧಿಸೂಚನೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+