ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಟಿಪಿಸಿ ನೇಮಕಾತಿ; 47 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಆಗಸ್ಟ್ 16; ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್‌ಟಿಪಿಸಿ) 47 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಭರ್ಥಿಗಳು ಸೆಪ್ಟೆಂಬರ್ 2, 2021ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಎನ್‌ಟಿಪಿಸಿ ಭಾರತದ ವಿವಿಧ ನಗರದಲ್ಲಿ ಖಾಲಿ ಇರುವ ಮೆಡಿಕಲ್ ಸ್ಪೆಷಲಿಸ್ಟ್, ಅಸಿಸ್ಟೆಂಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 30 ಸಾವಿರದಿಂದ 20,0000 ರೂ. ತನಕ ವೇತನವಿದೆ.

ಎಸ್‌ಬಿಐ ನೇಮಕಾತಿ; 46 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; 46 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಅಸಿಸ್ಟೆಂಟ್ ಆಫೀಸರ್ (ಫೈನಾನ್ಸ್) 20 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಎ ಅಥವ ICWA ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ಮೆಡಿಕಲ್ ಸ್ಪೆಷಲಿಸ್ಟ್ 27 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎಂಬಿಬಿಎಸ್, ಎಂಡಿ, ಡಿಎನ್‌ಬಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ಬೀದರ್‌; ಆಗಸ್ಟ್ 18ರಂದು ಮಿನಿ ಉದ್ಯೋಗ ಮೇಳ ಬೀದರ್‌; ಆಗಸ್ಟ್ 18ರಂದು ಮಿನಿ ಉದ್ಯೋಗ ಮೇಳ

NTPC Recruitment Apply For 47 Post

ಅಸಿಸ್ಟೆಂಟ್ ಆಫೀಸರ್ ಹುದ್ದೆಗೆ 30 ವರ್ಷ ಮತ್ತು ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗೆ 37 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಧಾರವಾಡ, ಕಲಬುರಗಿಯಲ್ಲಿ ಉದ್ಯೋಗ ಮೇಳ, ವಿವರಗಳು ಧಾರವಾಡ, ಕಲಬುರಗಿಯಲ್ಲಿ ಉದ್ಯೋಗ ಮೇಳ, ವಿವರಗಳು

ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ನಿವೃತ್ತ ಯೋಧ/ ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ 300 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನ್‌ಲೈನ್ ಅಥವ ಆಫ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡುವಾಗ ಸರಿಯಾದ ಇ-ಮೇಲ್ ವಿಳಾಸ ಮತ್ತು ಮೊಬೈಲ್ ನಂಬರ್‌ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ntpc.co.in ವೆಬ್‌ಸೈಟ್‌ಗೆ ಭೇಟಿ ನೀಡಿ.

English summary
National Thermal Power Corporation Limited invited applications for 47 post. Candidates can apply online till 2nd September 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X