62 ಸಂಶೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎನ್‌ಟಿಆರ್‌ಒ
ಬೆಂಗಳೂರು, ಮಾರ್ಚ್ 23 : ಎನ್‌ಟಿಆರ್‌ಒ 62 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 14 ಕೊನೆಯ ದಿನವಾಗಿದೆ.
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ(ಎನ್‌ಟಿಆರ್‌ಒ) 62 ಸಂಶೋಧಕರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲ ಶ್ರೇಣಿಯಲ್ಲಿ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಪ್ರಥಮ ಶ್ರೇಣಿಯಲ್ಲಿ ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಸೈನ್ಸ್ ಅಥವ ಇನ್‌ಫಾಮರ್‌ಮೇಷನ್ ಟೆಕ್ನಾಲಜಿಯಲ್ಲಿ ಪದವಿ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 14/4/2018ಕ್ಕೆ ಅನ್ವಯವಾಗುವಂತೆ.
ವೇತನ ಶ್ರೇಣಿ 56100 ರಿಂದ 177500 ರೂ.ಗಳು.
ಪ್ರಮುಖ ಅಂಶಗಳು
* ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ(ಎನ್‌ಟಿಆರ್‌ಒ)ನಲ್ಲಿ ಕೆಲಸ
* 62 ಸಂಶೋಧಕರ ಹುದ್ದೆಗಳು
* ಏಪ್ರಿಲ್ 14 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications