ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಲು ಮಾಹಿತಿಗಳು

ಕೊಪ್ಪಳ, ಫೆಬ್ರವರಿ 15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೋಷಣ ಅಭಿಯಾನ ಯೋಜನೆಯಲ್ಲಿ ಕೊಪ್ಪಳ ಜಿಲ್ಲಾ 2 ಹಾಗೂ ಕನಕಗಿರಿ ಯೋಜನಾ ಮಟ್ಟದಲ್ಲಿ 1 ಸೇರಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 4/3/2025 ಕೊನೆಯ ದಿನವಾಗಿದೆ.

ಸರ್ಕಾರದ ಆದೇಶ ನಿರ್ದೆಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಪತ್ರ ಸಂಖ್ಯೆ ಅನ್ವಯ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು, ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆ ಹಾಗೂ ಕನಕಗಿರಿ ಯೋಜನೆಯಲ್ಲಿ ತಾಲೂಕು ಸಂಯೋಜಕರ ಹುದ್ದೆ ಒಟ್ಟು ಖಾಲಿಯಿರುವ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.

Nutrition Campaign Vacancies Invited In Koppal Apply Now

ಪೋಷಣ ಅಭಿಯಾನ ಯೋಜನೆಯ ಜಿಲ್ಲೆಯಲ್ಲಿ ಜಾರಿಯಲ್ಲಿರುವವರೆಗೆ ಮಾತ್ರ ಎಂಬ ಷರತ್ತುಗಳು ಒಳಪಟ್ಟು ನೇರ ಗುತ್ತಿಗೆ ಆಧಾರದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಜಿಲ್ಲಾ ಸಂಯೋಜಕರ, ಜಿಲ್ಲಾ ಕಾರ್ಯಕ್ರಮ ಸಹಾಯಕರ ಮತ್ತು ಕನಕಗಿರಿ ಯೋಜನೆಯ ತಾಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು 4/3/2025ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಯ ವಿವರಗಳು: ಜಿಲ್ಲಾ ಸಂಯೋಜಕ ಒಂದು ಹುದ್ದೆ. ಅಭ್ಯರ್ಥಿ ಪದವಿ ಪಡೆದಿರಬೇಕು/ ವಿಜ್ಞಾನ ಅಥವ ಐಟಿ ವಿಷಯದಲ್ಲಿ ಡಿಪ್ಲೊಮಾ ಹೊಂದಿರಬೇಕು. ಅಪ್ಲಿಕೇಶನ್ ನಿರ್ವಹಣೆ ವಿಷಯದಲ್ಲಿ 2 ವರ್ಷದ ಅನುಭವ. ಸ್ಥಳೀಯ ಭಾಷೆಯಲ್ಲಿ ಉತ್ತಮವಾಗಿ ಮಾತನಾಡುವ/ ಬರೆಯುವ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯ. ಸಂಚಾರ ನಡೆಸುವುದು ಕಡ್ಡಾಯ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಜಿಲ್ಲಾ ಕಾರ್ಯಕ್ರಮ ಸಹಾಯಕ ಒಂದು ಹುದ್ದೆ. ಪದವಿ ಪಡೆದಿರಬೇಕು/ ಮ್ಯಾನೇಜ್‌ಮೆಂಟ್/ ಸಮಾಜ ವಿಜ್ಞಾನ/ ನ್ಯುಟ್ರಿಷಿಯನ್ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಹೊಂದಿರಬೇಕು. ಸಾಮರ್ಥ್ಯ ಅಭಿವೃದ್ಧಿ, ಸಾಮರ್ಥ್ಯ ಅಭಿವೃದ್ಧಿ ಕೌಶಲ್ಯಗಳ ವಿಷಯದಲ್ಲಿ 2 ವರ್ಷದ ಅನುಭವ. ಸ್ಥಳೀಯ ಭಾಷೆಯಲ್ಲಿ ಉತ್ತಮವಾಗಿ ಮಾತನಾಡುವ/ ಬರೆಯುವ ಕೌಶಲ್ಯ, ಕಂಪ್ಯೂಟರ್ ಜ್ಞಾನ/ ಇ-ಮೇಲ್ ಕಳಿಸುವುದು, ಗುಂಪು ಚರ್ಚೆ, ಸಂಚಾರ ನಡೆಸುವುದು ಕಡ್ಡಾಯ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ.

ತಾಲೂಕು ಸಂಯೋಜಕ 1 ಹುದ್ದೆ. ಪದವಿ ಪಡೆದಿರಬೇಕು. ಸಾಫ್ಟ್‌ವೇರ್ ಅಪ್ಲಿಕೇಶನ್ ಸಪೋರ್ಟ್ ವಿಷಯದಲ್ಲಿ 2 ವರ್ಷಗಳ ಅನುಭವ. ಸ್ಥಳೀಯ ಭಾಷೆಯಲ್ಲಿ ಉತ್ತಮವಾಗಿ ಮಾತನಾಡುವ/ ಬರೆಯುವ ಕೌಶಲ್ಯ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ವಿದ್ಯಾರ್ಹತೆ, ವಯೋಮಿತಿ, ಮತ್ತು ಸೇವಾ ಅನುಭವದ ವಿವರಗಳಿಗಾಗಿ ಮತ್ತು ಅರ್ಜಿ ನಮೂನೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿದೆ.

ಅರ್ಜಿ ನಮೂನೆಯನ್ನು ಈ ಕಛೇರಿಯಿಂದ ಪಡೆದುಕೊಳ್ಳಬೇಕು. ಅರ್ಹ ಅಭ್ಯರ್ಥಿಗಳು ಮಾರ್ಚ್ 4ರ ಸಂಜೆ 5.30ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಉಚಿತ ತರಬೇತಿಗೆ ಅರ್ಜಿ ಹಾಕಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುತ್ತದೆ.

10 ದಿನಗಳ ಕುರಿ-ಮೇಕೆ ಸಾಕಾಣಿಕೆ ತರಬೇತಿ, 30 ದಿನಗಳ ಮೊಬೈಲ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಹಾಗೂ ಮಹಿಳಾ ಹೊಲಿಗೆ ತರಬೇತಿಗಾಗಿ ಫೆಬ್ರವರಿ 22 ರಂದು ಸಂದರ್ಶನ ನಡೆಯಲಿದ್ದು, ಫೆ. 24 ರಿಂದ ತರಬೇತಿಗಳು ಪ್ರಾರಂಭ.

ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷದೊಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸಾಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿಯೊಂದಿಗೆ ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ 3 ಫೋಟೋ, ಅಂಕಪಟ್ಟಿ ಜೆರಾಕ್ಸ್ ಪ್ರತಿ ಸಲ್ಲಿಸಬೇಕು.

ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇವರಿಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 08539-231038, 9483618178, 7259073827.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+