NWKRTC Recruitment; ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಹಾಕಿ
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ವಿಭಾಗ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಕರೆದಿದೆ.
ಬೆಳಗಾವಿ, ಮಾರ್ಚ್ 06; ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ವಿಭಾಗ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಧ ವೃತ್ತಿಗಳಲ್ಲಿ ಶಿಶುಕ್ಷು ತರಬೇತಿ ನೀಡಲಾಗುತ್ತಿದೆ. ಆಸಕ್ತರು 18/3/2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಮೆಕಾನಿಕ್ ಡೀಸೆಲ್ 11, ಮೆಕ್ಯಾನಿಕ್ ಮೋಟರ್ ವೆಹಿಕಲ್ 10, ಎಲೆಕ್ಟ್ರಿಶಿಯನ್ 12, ಫಿಟ್ಟರ್ 5, ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) 1, ಟರ್ನರ್ 4, ಕೋಪಾ 28 ಹುದ್ದೆಗಳಿಗೆ ತರಬೇತಿ ನೀಡಲಾಗುತ್ತದೆ. ಈ ತರಬೇತಿಯ ಅವಧಿ ಒಂದು ವರ್ಷವಾಗಿದೆ ಎಂದು ನೇಮಕಾತಿ ಆದೇಶ ತಿಳಿಸಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಐಟಿಐನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು www.apprenticeshipindia.gov.in ಪೋರ್ಟಲ್‌ನಲ್ಲಿ ತಮ್ಮ ವೈಯಕ್ತಿಕ ಮಾಹಿತಿ/ ಶೈಕ್ಷಣಿಕ ಮಾಹಿತಿ/ ದಾಖಲಾತಿಗಳನ್ನು ಅಪ್‌ಲೋಡ್ ಮಾಡಬಹುದಾಗಿದೆ. ಪೋರ್ಟಲ್‌ನಲ್ಲಿ ಶೇ 100ರಷ್ಟು ಮಾಹಿತಿ ಅಪ್‌ಲೋಡ್ ಆಗಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ NWKRTC Belagavi EO217290001 ಗೆ ಅಪ್‌ಲೋಡ್ ಮಾಡಬಹುದಾಗಿದೆ.
ನೋಂದಣಿ ಇಲ್ಲದ/ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸದೇ ಇರುವಂತಹ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಯು ನೇರ ಸಂದರ್ಶನಕ್ಕಾಗಿ ಎಲ್ಲಾ ಶೈಕ್ಷಣಿಕ/ ವೈಯಕ್ತಿಕ ಮೂಲ ದಾಖಲಾತಿಗಳೊಂದಿಗೆ 18/3/2023ರಂದು ಹಾಜರಾಗಬೇಕು. ನೇರ ಸಂದರ್ಶನ ವಾ. ಕ. ರ. ಸಾ. ಸಂಸ್ಥೆಯ ಬೆಳಗಾವಿ ವಿಭಾಗೀಯ ಕಚೇರಿಯಲ್ಲಿ ಬೆಳಗ್ಗೆ 11ಕ್ಕೆ ನಡೆಯಲಿದೆ.
ತಾಂತ್ರಿಕ ಶಿಶುಕ್ಷು ತರಬೇತಿ ಮಾಸಿಕ ಭತ್ಯೆ/ ಜಾಹೀರಾತಿನ ಷರತ್ತು ನಿಬಂಧನೆ/ ಅರ್ಜಿ ನಮೂನೆ/ ಇತರೆ ಹೆಚ್ಚಿನ ಮಾಹಿತಿಗಾಗಿ 0831-2468130/ 7760991603 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್












Click it and Unblock the Notifications