Railway Recruitment: 898 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಪಾಸಾದವರು ಅರ್ಜಿ ಹಾಕಿ
Railway Job Recruitment: ಭಾರತೀಯ ರೈಲ್ವೆ ವ್ಯಾಪ್ತಿಯ ವಾಯುವ್ಯ ರೈಲ್ವೆ (NWR) ಯಿಂದ ವಿವಿಧ ನೂರಾರು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 3 ರಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 2ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವಾಯುವ್ಯ ರೈಲ್ವೆ ವ್ಯಾಪ್ತಿಯ ಬಿಕಾನೆರ್, ಅಜ್ಮೀರ್, ಜೈಪುರ ಮತ್ತು ಜೋಧ್‌ಪುರ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 898 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನಾಡಿದ್ದು ಅಕ್ಟೋಬರ್ 3ರಿಂದ ಅರ್ಜಿ ಸಲ್ಲಿಸಬಹುದು. ಅದಕ್ಕಾಗಿ ನೀವು ಇಲ್ಲಿರುವ ಅಧಿಕೃತ ವೆಬ್‌ಸೈಟ್ nwr.indianrailways.gov.in ಮೂಲಕ ಅರ್ಜಿ ಸಲ್ಲಿಸಬೇಕು.

ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: ವಾಯುವ್ಯ ರೈಲ್ವೆ (NWR)
ಹುದ್ದೆಗಳು: ಅಪ್ರೆಂಟಿಸ್ ಹುದ್ದೆಗಳ
ಒಟ್ಟು ಹುದ್ದೆಗಳು: 898
ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 03
ಅರ್ಜಿ ಸಲ್ಲಿಕೆ ಕೊನೆ ದಿನ: ನವೆಂಬರ್ 02
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಮಾನ್ಯತೆಯ ಶೈಕ್ಷಣಿಕ ಮಂಡಳಿಯಲ್ಲಿ ಕನಿಷ್ಠ ಶೇಕಡಾ 50 ಅಂಕ ಸಹಿತ SSLC ಪಾಸಾಗಿರಬೇಕು. ಸಂಬಂಧಿತ ವ್ಯಾಪಾರದಲ್ಲಿ NCVT ಅಥವಾ SCVT ನೀಡಿದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ ಎಂದು ತಿಳಿಸಲಾಗಿದೆ.
ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 24 ವರ್ಷ ವಯಸ್ಸು ಹೊಂದಿರಬೇಕು. ಅವರವರ ಜಾತಿ ಮೀಸಲಾತಿಗೆ ಅನುಗುಣವಾಗಿ ಮೀಸಲಾತಿ ವರ್ಗಗಳಿಗೆ 5 ವರ್ಷ, OBC ಗಳಿಗೆ 3 ವರ್ಷಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿ ಸಡಿಲಿಕೆ ಸೌಲಭ್ಯ ಸಿಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಹೇಗೆ?
ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಬದಲು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಈ ಪಟ್ಟಿಯು 10ನೇ ತರಗತಿ ಮತ್ತು ಐಟಿಐ ಅಂಕಪಟ್ಟಿಯಲ್ಲಿನ ಅಂಕಗಳನ್ನು ನೋಡಿ ಪರಿಗಣಿಸಲಾಗುತ್ತದೆ. ಅರ್ಜಿ ಸಲ್ಲಿಸು ಸಾಮಾನ್ಯ, ಒಬಿಸಿ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ಇದೆ. ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ಮೊದಲು ಆರ್‌ಆರ್‌ಸಿ ಜೈಪುರದ ಅಧಿಕೃತ rrcjaipur.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಕಾಣುವ "ಅಪ್ರೆಂಟಿಸ್ 04/2025" ವಿಭಾಗಕ್ಕೆ ಹೋಗಿ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಇಲ್ಲಿ ಕೇಳಲಾಗುವ ಎಲ್ಲ ಅಗತ್ಯ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಸಲ್ಲಿಕೆ ಬಳಿಕ ಭವಿಷ್ಯ ಪ್ರಯೋಜನಕ್ಕಾಗಿ ಅರ್ಜಿ ಪ್ರತಿ ತೆಗೆದಿಟ್ಟುಕೊಳ್ಳಿ ಎಂದು ತಿಳಿಸಲಾಗಿದೆ.












Click it and Unblock the Notifications