NYKS ನೇಮಕಾತಿ 2021: 13206 ಸ್ವಯಂಸೇವಕರಿಗೆ ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 8: ನೆಹರೂ ಯುವ ಕೇಂದ್ರ ಸಂಘಟನ್(NYKS)ನಿಂದ 2021ನೇ ಸಾಲಿನ ನೇಮಕಾತಿ ಆರಂಭಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕರ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 20ರೊಳಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Nehru Yuva Kendra Sangathan
ಹುದ್ದೆ ಹೆಸರು: National Youth Volunteers
ಒಟ್ಟು ಹುದ್ದೆಗಳು: 13206
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 20, 2021.
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಮೆಟ್ರಿಕ್ಯುಲೇಷನ್.
ವಯೋಮಿತಿ:
ಕನಿಷ್ಠ: 18 ವರ್ಷ
ಗರಿಷ್ಠ: 29 ವರ್ಷ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ: ಅಂಕಗಳ ಆಧಾರ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05/02/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20/02/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ