ಆಯಿಲ್ ಇಂಡಿಯಾದಲ್ಲಿ 146 ಹುದ್ದೆಗಳಿವೆ, ಕೂಡಲೇ ಅರ್ಜಿ ಹಾಕಿ
ನವದೆಹಲಿ, ನವೆಂಬರ್ 25: ಆಯಿಲ್ ಇಂಡಿಯಾ ಸಂಸ್ಥೆ 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 146 ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 09, 2021ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಆಯಿಲ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆ: 146
ಹುದ್ದೆ ಹೆಸರು: Diploma Apprentice (Grade VII)
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 09, 2021
ಹುದ್ದೆಗಳು-ಮೀಸಲಾತಿ
ಮೀಸಲಾತಿ ರಹಿತ: 61
ಪರಿಶಿಷ್ಟ ಜಾತಿ (SC): 14
ಪರಿಶಿಷ್ಟ ಪಂಗಡ(ST): 17
ಇತರೆ ಹಿಂದುಳಿದ ವರ್ಗ(OBC): 40
ಆರ್ಥಿಕವಾಗಿ ಹಿಂದುಳಿದ ವರ್ಗ(EWS): 14

ಹುದ್ದೆ ಅರ್ಹತೆ: ಹುದ್ದೆಗಳ ಸಂಖ್ಯೆ
ಡಿಪ್ಲೋಮಾ ಇನ್ ಕೆಮಿಕಲ್ ಇಂಜಿನಿಯರಿಂಗ್: 08
ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್: 12
ಡಿಪ್ಲೋಮಾ ಇನ್ ಕಂಪ್ಯೂಟರ್ ಇಂಜಿನಿಯರಿಂಗ್: 05
ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್: 21
ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್: 03
ಡಿಪ್ಲೋಮಾ ಇನ್ ಇನ್ಸ್ಟ್ರೂಮೆಂಟೇಷನ್ ಇಂಜಿನಿಯರಿಂಗ್: 32
ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್: 65
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಡಿಪ್ಲೋಮಾ (ಇಂಜಿನಿಯರಿಂಗ್) ಪಾಸ್ ಆಗಿರಬೇಕು.
ವಯೋಮಿತಿ:
ವಿವಿಧ ಹುದ್ದೆಗಳಿಗೆ ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ ಕನಿಷ್ಠ 18 ರಿಂದ ಗರಿಷ್ಠ 30 ವರ್ಷ. ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಎಸ್ ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಸಿಗಲಿದೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ ಅಭ್ಯರ್ಥಿ: 200 ರು
ಎಸ್‌ಸಿ /ಎಸ್‌ಟಿ/ ದಿವ್ಯಾಂಗ/ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ.
ಶುಲ್ಕಪಾವತಿ ವಿಧಾನ: ಆನ್ ಲೈನ್ ಮೂಲಕ ಎಸ್ ಬಿ ಐ ಇ-ಕಲೆಕ್ಟ್
ನೇಮಕಾತಿ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ), ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆಯಲ್ಲಿ ನಿಗದಿತ ಅಂಕ ಗಳಿಸಿ ಮುಂದಿನ ಹಂತಕ್ಕೆ ಅರ್ಹರಾಗಬಹುದು. ವೈಯಕ್ತಿಕ ಸಂದರ್ಶನ (ಪಿಐ). ಇಂಗ್ಲೀಷ್ ಭಾಷೆ, ಸಾಮಾನ್ಯ ಜ್ಞಾನ: ಶೇ 20 ರಷ್ಟು ಅಂಕ, ತಾಂತ್ರಿಕ ಜ್ಞಾನ: ಶೇ 60ರಷ್ಟು, ಇತರೆ: ಶೇ 20ರಷ್ಟು ಅಂಕ ಗಳ ಪರೀಕ್ಷೆ ಇರಲಿದೆ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10/11/2021
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 09/12/2021
ಅರ್ಜಿ ಸಲ್ಲಿಸುವ ವಿಧಾನ:
* ಆಯಿಲ್ ಇಂಡಿಯಾ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಪ್ರೆಂಟಿಸ್ ಶಿಪ್ ಇಂಡಿಯಾ ವೆನ್ ತಾಣದಲ್ಲಿ ಲಾಗಿನ್ ಆಗಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಆಯಿಲ್ ಇಂಡಿಯಾ ಅಧಿಕೃತ ವೆಬ್ ತಾಣದ ಕ್ಲಿಕ್ ಮಾಡಿ












Click it and Unblock the Notifications