ಪಿಯುಸಿ ಮುಕ್ತಾಯ; 1 ವರ್ಷದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಹಾಕಿ

ಬೆಂಗಳೂರು, ಮೇ 21: ದ್ವಿತೀಯ ಪಿಯುಸಿ ಪಾಸು ಮಾಡಿದ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರದಲ್ಲಿ ಒಂದು ವರ್ಷದ ಕೌಶಲ್ಯ ತರಬೇತಿಯನ್ನು ತರಬೇತಿ ಭತ್ಯೆಯೊಂದಿಗೆ ನೀಡಲಾಗುತ್ತದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಉದ್ಯೋಗ ಮಹಾನಿರ್ದೇಶನಾಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ಈ ತರಬೇತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ.

One Year Free Skill Development Training In Bengaluru

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ ಯುವತಿರಿಗೆ ಬೆಂಗಳೂರಿನಲ್ಲಿ ಉಚಿತವಾಗಿ ಒಂದು ವರ್ಷದ ಅವಧಿಯ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿವರಗಳು: ಭಾರತ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯ, ನವದೆಹಲಿಯ ಅಧೀನ ಕಛೇರಿಯಾದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಆವರಣ, ಕೌಶಲ್ಯ ಭವನ ಹಿಂಭಾಗ, ಡೈರಿ ಸರ್ಕಲ್, ಬೆಂಗಳೂರು-560029 ಕಛೇರಿಯು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ ಯುವತಿಯರಿಗೆ ಬೆಂಗಳೂರಿನಲ್ಲಿರುವ ನೋಂದಾಯಿತ ಶೈಕ್ಷಣಿಕ ಸಂಸ್ಥೆಗಳ ಮೂಲಕ ಗುಂಪು 'ಸಿ' ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಒಂದು ವರ್ಷದ ಅವಧಿಯ ವಿಶೇಷ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ.

ಈ ಕೌಶಲ್ಯ ತರಬೇತಿಗೆ ಪ್ರವೇಶ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ತರಬೇತಿ ಯೋಜನೆ, ಓ ಲೇವಲ್ ಕಂಪ್ಯೂಟರ್ ತರಬೇತಿ, ಓಲೇವಲ್ ಕಂಪ್ಯೂಟರ್ ಸಿಎಚ್ಎಮ್, ಆಫೀಸ್ ಅಟೋಮೋಷನ್, ಅಕೌಂಟಿಂಗ್ ಮತ್ತು ಪಬ್ಲಿಷಿಂಗ್ ಅಸಿಸ್ಟಂಟ್, ಕಂಪ್ಯೂಟರ್ ಅಪ್ಲಿಕೇಷನ್ ಮತ್ತು ಬ್ಯೂಸಿನೆಸ್ ಅಕೌಂಟಿಂಗ್ ಅಸೋಸೀಯಟ್ ಮತ್ತು ಸೈಬರ್ ಸೆಕ್ಯೂರ್ಡ್ ವಬ್ ಡವಲಪಮೆಂಟ್ ಅಸೋಸೀಯೇಟ್ ಸೇರಿ ಒಟ್ಟು 6 ತರಬೇತಿಗಳಿವೆ.

ಈ ತರಬೇತಿಗಳಿಗೆ ಪ್ರವೇಶ ಪಡೆಯಲು ಪಿಯುಸಿ/ 12 ವಿದ್ಯಾರ್ಹತೆ ಇದ್ದು, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಹಾಜರಾತಿ ನಿಯಮಗಳಿಗೊಳಪಟ್ಟು ತರಬೇತಿ ಭತ್ಯೆ ನೀಡಲಾಗುತ್ತದೆ. ಕಛೇರಿಯ ಸಮಯದಲ್ಲಿ ಸಂಪರ್ಕಿಸಿ ಅರ್ಜಿ ಹಾಗೂ ಸೇವಾ ಷರತ್ತುಗಳನ್ನು ಪಡೆಯಬಹುದು.

ಅಗತ್ಯ ದಾಖಲೆಗಳ ಜೊತೆಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ 10/06/2024ರ ಸಂಜೆ 5 ಗಂಟೆ. ಕಛೇರಿಗೆ ಅರ್ಜಿಗಳನ್ನು ನೋಂದಾಯಿತ ಪೋಸ್ಟ್/ ಖದ್ದಾಗಿ ಬಂದು ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅರ್ಜಿ ಪಡೆಯಲು ಕಛೇರಿಯ ಮುಖ್ಯಸ್ಥರಾದ ಉಪ-ಪ್ರಾದೇಶಿಕ ಉದ್ಯೋಗಾಧಿಕಾರಿಗಳನ್ನು ಸಂಪರ್ಕಿಸಬಹುದು.

ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1/7/2024 ರಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿ ಆಯೋಜಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ ಹಾಗೂ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ತರಬೇತಿ ಪಡೆಯಲು ಕನಿಷ್ಠ ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ.

ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಶಿಷ್ಯವೇತನ ನೀಡಲಾಗುತ್ತದೆ ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ, ವಿನೋಬನಗರ 2ನೇ ಹಂತ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕರೆ ಮಾಡಿ 08182-248873 ಮತ್ತು 7022429440.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+