1032 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಒಎನ್‌ಜಿಸಿ

ಬೆಂಗಳೂರು, ಏಪ್ರಿಲ್ 25 : ಒಎನ್‌ಜಿಸಿ 1032 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮೇ 3, 2018 ಅಂತಿಮ ದಿನವಾಗಿದೆ.

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ) ಕೆಮಿಸ್ಟ್, ಟ್ರಾನ್ಸ್‌ಪೋರ್ಟ್ ಆಫೀಸರ್ ಸೇರಿದಂತೆ 1032 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಕೆಮಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಸಾಯನ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಟ್ರಾನ್ಸ್‌ಪೋರ್ಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಇಂಜಿನಿಯರಿಂಗ್ ಅಥವ ಹುದ್ದೆಗೆ ಸಂಬಂಧಿಸಿದ ಕೋರ್ಸ್‌ ಪೂರ್ಣಗೊಳಿಸಿರಬೇಕು.

ONGC recruitment 2018 : Apply for 1032 Various Posts

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 30, ಓಬಿಸಿ ಅಭ್ಯರ್ಥಿಗಳಿಗೆ 33, ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 35 ವರ್ಷ. ಅಂಕವಿಕಲ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಬಿಐ ಬ್ಯಾಂಕ್ ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಚಲನ್‌ನಲ್ಲಿ ONGC Power Jyoti A/C no. 30827318409 of SBI, Tel Bhavan, Dehradun ಎಂದು ಭರ್ತಿ ಮಾಡಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ/ಓಬಿಸಿ 370 ರೂ. ಶುಲ್ಕವಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+