ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಓಎನ್‌ಜಿಸಿ ನೇಮಕಾತಿ : 107 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮೇ 31 : ಓಎನ್‌ಜಿಸಿ 107 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 18/6/2019 ಕೊನೆಯ ದಿನವಾಗಿದೆ.

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಓಎನ್‌ಜಿಸಿ) ಮೆಡಿಕಲ್ ಆಫೀಸರ್, ಸೆಕ್ಯೂರಿಟಿ ಆಫೀಸರ್ ಸೇರಿದಂತೆ 107 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಸೈಲ್ ನೇಮಕಾತಿ : ಇಂಜಿನಿಯರಿಂಗ್ ಪದವೀಧರರು ಅರ್ಜಿ ಹಾಕಿಸೈಲ್ ನೇಮಕಾತಿ : ಇಂಜಿನಿಯರಿಂಗ್ ಪದವೀಧರರು ಅರ್ಜಿ ಹಾಕಿ

ಎಂಬಿಬಿಎಸ್, ಪದವಿ, ಐಸಿಡ್ಲ್ಯುಎ, ಸಿಎ, ಎಂಬಿಎ, ಎಂಇ/ಎಂ.ಟೆಕ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇಂಡಿಯನ್ ಆಯಿಲ್ ನಲ್ಲಿ 64 ಟೆಕ್ನಿಷಿಯನ್ ಶಿಶಿಕ್ಷು ಹುದ್ದೆಗಳಿವೆಇಂಡಿಯನ್ ಆಯಿಲ್ ನಲ್ಲಿ 64 ಟೆಕ್ನಿಷಿಯನ್ ಶಿಶಿಕ್ಷು ಹುದ್ದೆಗಳಿವೆ

ONGC recruitment : Apply for 107 Various Post

ಅರ್ಜಿ ಸಲ್ಲಿಸುವ ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 33 ವರ್ಷ, ಎಸ್‌ಸಿ/ಎಸ್‌ಟಿ/ನಿವೃತ್ತಿ ಯೋಧರಿಗೆ 35 ವರ್ಷ, ಅಂಗವಿಕಲರಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ದಕ್ಷಿಣ ರೈಲ್ವೆ ನೇಮಕಾತಿ : 142 ಹುದ್ದೆಗಳಿಗೆ ಅರ್ಜಿ ಹಾಕಿದಕ್ಷಿಣ ರೈಲ್ವೆ ನೇಮಕಾತಿ : 142 ಹುದ್ದೆಗಳಿಗೆ ಅರ್ಜಿ ಹಾಕಿ

ಆಯ್ಕೆಯಾದ ಅಭ್ಯರ್ಥಿಗಳಿಗೆ 60000-180000 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 370 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Oil and Natural Gas Corporation Limited( ONGC) recruitment. Notification has been released on official website for 107 post. The candidate who is looking for Medical Officer, Security Officer can apply online before 18-06-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X