• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಖಾಲಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಸೆಪ್ಟೆಂಬರ್ 25: ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 46 ಕಾರ್ಯಕರ್ತೆಯರು ಹಾಗೂ 91 ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು www.anganwadirecruit.kar.nic.inರಲ್ಲಿ ಸೆಪ್ಟಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08182-295514/250014 ಗಳನ್ನು ಸಂಪರ್ಕಿಸಬಹುದು.

ಅದೇ ರೀತಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ 6 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು 29/9/2020ರ ಮಧ್ಯಾಹ್ನ 12ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಆಯುಷ್ ನಿರ್ದೇಶನಾಲಯದ ಪತ್ರ ಸಂಖ್ಯೆ ಅನ್ವಯ ಹೆಲ್ತ್ ಅಂಡ್ ವೆಲ್ ನೆಸ್ ಸೆಂಟರ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾದ ಶಿವಮೊಗ್ಗ ಜಿಲ್ಲೆಯಲ್ಲಿನ ಮೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳಿಗೆ ತಲಾ 2 ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ.

English summary
Online applications have been invited for the posts of Anganwadi workers and helpers of Shivamogga District Women and Child Development Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X