ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ
ಬೆಂಗಳೂರು, ಜನವರಿ 15: ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿ, ಬೆಂಗಳೂರು ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಆದೇಶವನ್ನು ಹೊರಡಿಸಿದೆ. ಈ ಪ್ರಕ್ರಿಯೆಯನ್ನು ತಂತ್ರಾಂಶದ ಮೂಲಕ ಮಾಡಬೇಕು ಎಂದು ಸೂಚಿಸಲಾಗಿರುತ್ತದೆ. ಈ ತಂತ್ರಾಂಶ ಹೇಗೆ ಕಾರ್ಯ ನಿರ್ವಹಣೆ ಮಾಡಲಿದೆ? ಎಂದು ತಿಳಿಸಲಾಗಿದೆ.
ಈ ಆದೇಶ ರಾಜ್ಯದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಪತ್ರ, ಸುತ್ತೋಲೆಗಳನ್ನು ಉಲ್ಲೇಖಿಸಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಪತ್ರ ದಿನಾಂಕ 07/08/2024ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ 01.01.2016 ರಿಂದ 31.12.2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ. ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ.
ಸರ್ಕಾರದ ಆದೇಶ ದಿನಾಂಕ 07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಅವರ ಟಿಪ್ಪಣಿ ದಿನಾಂಕ 24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದೆ.
ಈ ತಂತ್ರಾಂಶವು 6 ಹಂತಗಳನ್ನು ಒಳಗೊಂಡಿದೆ
* ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವುದು.
* ಆಡಳಿತ ಮಂಡಳಿಯಿಂದ ಖಾಲಿ ಹುದ್ದೆ ಭರ್ತಿಗೆ ಅನುಮತಿ ಕೋರಿ ಸಂಬಂಧಿಸಿದ
ಆಯುಕ್ತಾಲಯಗಳಿಗೆ ಪ್ರಸ್ತಾವನೆ ಸಲ್ಲಿಕೆ.
* ಆಯಾ ಆಯುಕ್ತಾಲಯಗಳಲ್ಲಿ ಸಮಿತಿಗಳನ್ನು ರಚಿಸಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶಿಫಾರಸು ಮಾಡುವುದು. ಶಿಫಾರಸ್ಸು ಆಧರಿಸಿ ಖಾಲಿ ಹುದ್ದೆ ಭರ್ತಿಗೆ ಅನುಮತಿ ನೀಡುವುದು.
* ಆಡಳಿತ ಮಂಡಳಿಗಳು ಅನುಮತಿಸಿದ ಹುದ್ದೆಗಳಿಗೆ ನಿಯಮಾನುಸಾರ ನೇಮಕಾತಿ ಪ್ರಕ್ರಿಯ ಕೈಗೊಂಡು ಸಂಬಂಧಿಸಿದ ಉಪ ನಿರ್ದೇಶಕರಿಗೆ ನೇಮಕಾತಿ ಅನುಮೋದನೆಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನೆ ಸಲ್ಲಿಕೆ.
* ಉಪ ನಿರ್ದೇಶಕರಿಂದ ಪರಿಶೀಲಿಸಿ ಸಂಬಂಧಿಸಿದ ಆಯುಕ್ತಾಲಯಗಳಿಗೆ ಅನ್‌ಲೈನ್‌ನಲ್ಲಿ ಪ್ರಸ್ತಾವನೆಗಳ ಸಲ್ಲಿಕೆ
* ಸಂಬಂಧಿಸಿದ ಆಯುಕ್ತಾಲಯಗಳಿಂದ ಸರ್ಕಾರಕ್ಕೆ, ಆನ್‌ಲೈನ್‌ನಲ್ಲಿ ಅನುಮೋದನೆಗೆ ಸಲ್ಲಿಕೆ
ಪ್ರಸ್ತುತ ಮೇಲೆ ತಿಳಿಸಿರುವ 6 ಹಂತಗಳಲ್ಲಿ ಮೊದಲ ಎರಡು ಹಂತಗಳ ತಂತ್ರಾಂಶ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು ಉಳಿದ ಹಂತಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ಸರ್ಕಾರದ ಸುತ್ತೋಲೆ ದಿನಾಂಕ 25-11-2024ರಂದು ಎಲ್ಲಾ ನೇಮಕಾತಿ ಪ್ರಕ್ರಿಯೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸದಿರಲು ಆದೇಶಿಸಲಾಗಿದೆ. ಸದರಿ ಆದೇಶದಂತ ಮೊದಲ ಹಂತದ ತಂತ್ರಾಂಶ (BEO Login) ನ್ನು ಚಾಲ್ತಿಗೊಳಿಸುವುದನ್ನು ತಡೆಹಿಡಿದು, ಈ ಕುರಿತು ಸರ್ಕಾರಕ್ಕೆ, ಮಾರ್ಗದರ್ಶನ ಕೋರಲಾಗಿದೆ.
ಆದರ ವಿವಿಧ ಶಾಲಾ ಆಡಳಿತ ಮಂಡಳಿಗಳಿಂದ ಹಾಗೂ ಜನ ಪ್ರತಿನಿಧಿಗಳಿಂದ ಸರ್ಕಾರವು ದಿನಾಂಕ 07-08-2024ರಲ್ಲಿ ಆದೇಶ ಮಾಡಿದ್ದರೂ ಸದರಿ ಪ್ರಕ್ರಿಯೆಯನ್ನು ಪ್ರಾರಂಭಿಸಿಲ್ಲ ಎಂದು ತಿಳಿಸುತ್ತಾ ಪಕ್ರಿಯೆ ಪ್ರಾರಂಭಿಸಲು ಕೋರಿ ಮನವಿಗಳು ಸ್ವೀಕೃತವಾಗುತ್ತಲಿದೆ.
ಈ ಹಿನ್ನೆಲೆಯಲ್ಲಿ ತಂತ್ರಾಂಶದ ಮೊದಲ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವ ಪ್ರಕ್ರಿಯೆ ಒಳಗೊಂಡಿದ್ದು ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗಧಿಪಡಿಸುವ ಪ್ರಕ್ರಿಯೆ ಇರುವುದಿಲ್ಲ.
ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆರವರನ್ನು ಕೋರಲಾಗಿದೆ. ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗದಿಪಡಿಸುವ ಪ್ರಕ್ರಿಯೆ ಇರುವುದಿಲ್ಲ. ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿದೆ ಎಂದು ಹೇಳಿದೆ.












Click it and Unblock the Notifications