Karnataka Government Jobs; ಹೊರಗುತ್ತಿಗೆ ನೇಮಕಾತಿ, ಮೀಸಲಾತಿ ವಿವರ
ಬೆಂಗಳೂರು, ಮೇ 20: ಕರ್ನಾಟಕದ ಸರ್ಕಾರದ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ನಡೆಸಲಾಗುತ್ತದೆ. ಈ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ.
ಈ ಕುರಿತು ರಂದೀಪ್ ಡಿ. ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ ಮತ್ತು ದಿನಾಂಕ 19/5/2022ರ ಸುತ್ತೋಲೆ ಸಂಖ್ಯೆ: ಸಿಆಸುಇ 137 ಎಇಎಸ್ 2022 ಉಲ್ಲೇಖ ಮಾಡಲಾಗಿದೆ.

ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಭಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಸುತ್ತೋಲೆ ಹೇಳಿದೆ.
ದಿನಾಂಕ 21/12/2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಮೀಸಲಾತಿ ನಿಯಮಗಳು
* ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
* ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
* ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
* ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ, ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಟೆಂಡರ್ ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
* ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ ಅರ್ಧದಲ್ಲಿ ಬಿಟ್ಟಿದ್ದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
* ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
* ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
* ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
ಅಲ್ಲದೇ ಸೂತ್ತೋಲೆಯಲ್ಲಿ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು/ ಸ್ವಾಯತ್ತ ಸಂಸ್ಥೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Karnataka: ರಾಜ್ಯದಲ್ಲಿ ಹೆಚ್ಚಾಯ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 3 ವರ್ಷದಲ್ಲಿ 27 ಸಾವು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ












Click it and Unblock the Notifications