ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9.79 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ

ನವದೆಹಲಿ, ಡಿಸೆಂಬರ್ 14: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಲೋಕಸಭೆಗೆ ಬುಧವಾರ ಮಾಹಿತಿ ನೀಡಲಾಗಿದೆ.

ವೆಚ್ಚ ಇಲಾಖೆಯ ವೇತನ ಸಂಶೋಧನಾ ಘಟಕದ ವಾರ್ಷಿಕ ವರದಿಯ ಪ್ರಕಾರ (ಮಾರ್ಚ್ 1, 2021 ಕೊನೆಗೊಂಡಂತೆ), ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳ ಅಡಿಯಲ್ಲಿ 9,79,327 ಹುದ್ದೆಗಳು ಖಾಲಿ ಇವೆ.

ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ತಮ್ಮ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ಸಂಸತ್‌ಗೆ ನೀಡಿದ್ದಾರೆ.

Over 9.79 Lakh Vacancies In Central Government For Different Posts, Departments: Centre

'ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳು/ಸಂಘಟನೆಗಳ ಅಗತ್ಯತೆಗಳ ಪ್ರಕಾರ, ಹುದ್ದೆಗಳು ಖಾಲಿಯಾಗುವುದು ಹಾಗೂ ಅವುಗಳನ್ನು ಭರ್ತಿ ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ' ಎಂದು ಡಾ. ಜಿತೇಂದ್ರ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.

ಭರ್ತಿಯಾಗದ ಹುದ್ದೆಗಳನ್ನು ಸಕಾಲದಲ್ಲಿ ಭರ್ತಿ ಮಾಡುವಂತೆ ಸರ್ಕಾರ ಈಗಾಗಲೇ ಎಲ್ಲಾ ಸಚಿವಾಲಯಗಳು/ ಇಲಾಖೆಗಳಿಗೆ ಸೂಚನೆ ನೀಡಿದೆ ಎಂದು ಸಿಂಗ್ ಹೇಳಿದ್ದಾರೆ.

ಭಾರತ ಸರ್ಕಾರವು ಆಯೋಜಿಸುತ್ತಿರುವ ಉದ್ಯೋಗ ಮೇಳಗಳು ಮತ್ತಷ್ಟು ಉದ್ಯೋಗ ಸೃಷ್ಟಿಯನ್ನು ಮಾಡುತ್ತಿವೆ. ಈ ಕಾರ್ಯವು ಅತಿ ವೇಗದಿಂದ ಸಾಗುತ್ತಿದೆ. ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಯುವಜನರಿಗೆ ಅರ್ಥಪೂರ್ಣ ಅವಕಾಶಗಳನ್ನು ಉದ್ಯೋಗ ಮೇಳಗಳು ಒದಗಿಸುತ್ತವೆ ಎಂದು ಅವರು ತಿಳಿಸಿದ್ದಾರೆ.

Over 9.79 Lakh Vacancies In Central Government For Different Posts, Departments: Centre

ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಗಳಿಗೆ ಸಂಬಂಧಿಸಿದಂತೆ 1,472 ಹುದ್ದೆಗಳು ಖಾಲಿ ಇವೆ ಎಂದು ಮತ್ತೊಂದು ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

ನಾಗರಿಕ ಪಟ್ಟಿ 2022 ರ ಪ್ರಕಾರ, ರಾಜ್ಯವಾರು ಮಂಜೂರಾದ ಭಾರತೀಯ ಆಡಳಿತ ಸೇವೆಯ ಸ್ಥಾನದಲ್ಲಿರುವ ಅಧಿಕಾರಿಗಳ ಸಂಖ್ಯೆ ಕ್ರಮವಾಗಿ 6,789 ಮತ್ತು 5,317 ಇದೆ ಎಂದು ಅವರು ಹೇಳಿದ್ದಾರೆ.

ಕೇಡರ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಕೇಂದ್ರ ಸರ್ಕಾರದ ಪ್ರಯತ್ನವಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಪ್ರತಿ ವರ್ಷ ಭಾರತೀಯ ಆಡಳಿತ ಸೇವೆಯ ವಿಭಾಗದಲ್ಲಿ ನೇರ ನೇಮಕಾತಿ ಆಧಾರದ ಮೇಲೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ನಾಗರಿಕ ಸೇವೆಗಳ ಪರೀಕ್ಷೆಯನ್ನು (CES) ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSE) ನಡೆಸುತ್ತದೆ ಎಂದು ಅವರು ಹೇಳಿದ್ದಾರೆ.

ನೇರವಾಗಿ ನೇಮಕಗೊಂಡ (DR) ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳ ಉತ್ತಮ ಭರ್ತಿಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಬಸ್ವಾನ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸಿಎಸ್‌ಇ-2012 ರಿಂದ ಸಿವಿಲ್ ಸರ್ವೀಸಸ್ ಪರೀಕ್ಷೆಯ ಮೂಲಕ ಸರ್ಕಾರವು ಐಎಎಸ್ ಅಧಿಕಾರಿಗಳ ವಾರ್ಷಿಕ ಭರ್ತಿ ಸಂಖ್ಯೆಯನ್ನು 180ಕ್ಕೆ ಹೆಚ್ಚಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+