ಉದ್ಯೋಗ ಖಾತರಿಯೊಂದಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ತರಬೇತಿ

ಬೆಂಗಳೂರು, ಅಕ್ಟೋಬರ್ 20; ಕರ್ನಾಟಕದ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ 1500 ನಿರುದ್ಯೋಗಿ ಯುವಕ/ ಯುವತಿಯರಿಗೆ ತರಬೇತಿ ನೀಡುತ್ತಿದೆ. ತರಬೇತಿ ಪಡೆಯಲು ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 15 ಸಂಜೆ 6 ಗಂಟೆ ಕೊನೆಯ ದಿನವಾಗಿದೆ.

500ಕ್ಕಿಂತ ಹೆಚ್ಚಿನ ಹಾಸಿಗೆ ಹೊಂದಿರುವ ಹಾಗೂ ಎನ್‌ಎಬಿಎಚ್‌ನಿಂದ ಮಾನ್ಯತೆ ಪಡೆದ ಹಾಸ್ಟಿಟಲ್‌ಗಳ ಮೂಲಕ ಶೇ 75ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳ ತರಬೇತಿಯನ್ನು ನೀಡಲಾಗುತ್ತಿದೆ. ಈ ತರಬೇತಿ ವಸತಿ ಸಹಿತವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ಯಾರಮೆಡಿಕಲ್ ಕೌಶಲ್ಯ ತರಬೇತಿಗೆ ಅಭ್ಯರ್ಥಿಗಳನ್ನು ಅರೆ ವೈದ್ಯಕೀಯ ಕೋರ್ಸ್‌ಗಳಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ನಾನ್ ಪ್ಯಾರಾಮೆಡಿಕಲ್ ಕೋರ್ಸ್‌ಗಳಿಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Para Medical Training By Social Welfare Dept Apply Now

ತರಬೇತಿ ವಿವರಗಳು; ಪ್ಯಾರ ಮೆಡಿಕಲ್ ಅಸ್ಟಿಸ್ಟೆಂಟ್ (ನಾನ್ ಪ್ಯಾರಾಮೆಡಿಕ್). ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿ ಮೂರು ತಿಂಗಳು.

ಪ್ಯಾರಾಮೆಡಿಕ್ ಟೆಕ್ನಿಷಿಯನ್ (ಪ್ಯಾರಾಮೆಡಿಕ್) ಕೌಶಲ್ಯ ತರಬೇತಿ ಅವಧಿ ಮೂರು ತಿಂಗಳು. ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 40 ವರ್ಷಗಳು.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳ ಆದಾಯ ಎಲ್ಲಾ ಮೂಲಗಳಿಂದ ರೂ. 5 ಲಕ್ಷ ಮೀರರಬಾರದು. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

ಆಯ್ಕೆ ವಿಧಾನ; ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಾಗ ನಿಗದಿತ ವಿದ್ಯಾರ್ಹತೆಯಲ್ಲಿಗಳಿಸಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ನಿಯೋಜನೆ ಮಾಡಲಾಗುತ್ತದೆ.

ನಿಗದಿತ ಗುರಿಗೆ ಅನುಗುಣವಾಗಿ ಅರ್ಜಿಗಳು ಬಾರದಿದ್ದಾಗ, ತರಬೇತಿ ನಡೆಯುತ್ತಿರುವ ಸಂದರ್ಭದಲ್ಲಿ ಬರುವ ಅರ್ಜಿಗಳನ್ನು ಮ್ಯಾನ್ಯುಯಲ್ ರೂಪದಲ್ಲಿ ನೇರವಾಗಿ ಸ್ವೀಕರಿಸಿ, ಅರ್ಹತಾ ಮಾನದಂಡಗಳನ್ನು ಪೂರೈಸಿದವರನ್ನು ತರಬೇತಿಗೆ ನಿಯೋಜನೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?; ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸ್ಕ್ಯಾನ್‌ ಮಾಡಿ ಇ-ಮೇಲ್ ವಿಳಾಸ [email protected] ಗೆ ಸಲ್ಲಿಕೆ ಮಾಡಬೇಕು. ತಾಂತ್ರಿ ಸಮಸ್ಯೆ ಉಂಟಾದರೆ ಸಹಾಯವಾಣಿ 22207784.

ಸ್ಥಾನ ಹಂಚಿಕೆ ಹೇಗೆ?; ಅಂಗವಿಕಲ/ ವಿಕಲಚೇತನರಿಗೆ ಶೇ 4ರ ಮೀಸಲಾತಿ ಇದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶೇ 10, ವಸತಿ ಶಾಲೆಯ ವಿದ್ಯಾರ್ಥಿಗಳಿಗೆ 10, ಮಹಿಳಾ ಅಭ್ಯರ್ಥಿಗಳಿಗೆ ಶೇ 33, ಸೂಕ್ಷ್ಮ/ ಅತಿ ಸೂಕ್ಷ್ಮ ಸಮುದಾಯ/ ಸಫಾಯಿ ಕರ್ಮಚಾರಿ, ಸಮುದಾಯದ ಮಕ್ಕಳಿಗೆ ಶೇ 5ರಷ್ಟು ಮೀಸಲಾತಿ ಇದೆ.

ಸೂಚನೆಗಳು

* ಇಲಾಖೆ ವೆಬ್‌ಸೈಟ್‌ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಹಾಗೂ ಅಂತಿಮವಾಗಿರುತ್ತದೆ.

* ಇಲಾಖಾವತಿಯಿಂದ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲ. ಇಲಾಖಾ ವೆಬ್‌ ಸೈಟ್‌ ಅನ್ನು ಮಾತ್ರ ವೀಕ್ಷಿಸಬೇಕು.

* ತಪ್ಪು ಮಾಹಿತಿ ಕಾರಣದಿಂದ ಉಂಟಾಗಬಹುದಾದದ ಲೋಪಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳೇ ಕಾರಣ

* ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿ ಜಾತಿ ಪ್ರಮಾಣ ಪತ್ರ ಅಪ್‌ಲೋಡ್ ಮಾಡಬೇಕು

* ಆದಾಯ ಪ್ರಮಾಣ ಪ್ರವನ್ನು ಸಹ ಅಪ್‌ಲೋಡ್ ಮಾಡಬೇಕು

* ನಾನ್ ಪ್ಯಾರಾ ಮೆಡಿಕಲ್ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಅಂಕ ಪಟ್ಟಿ ಸಲ್ಲಿಸಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+