ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ, ಪಿಡಿಒ ನೇಮಕಾತಿ ವಿವರ

Posted By: Staff
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 08 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ ಗ್ರೇಡ್‍-1 ವೃ೦ದದ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/10/2016.

ಪಿಡಿಒ, ಗ್ರೇಡ್-1 ನೇಮಕಾತಿ ದಾಖಲಾತಿಗಳ ಪರಿಶೀಲನೆ ದಿನಾಂಕ ಮುಂದೂಡಿಕೆ

815 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು 809 ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ ಗ್ರೇಡ್‍-1 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಯು ಯಾವುದಾದರೂ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಒಮ್ಮೆ ನಮೂದಿಸಿದ ನಂತರ ಅದೇ ಅಂತಿಮ, ಬದಲಾವಣೆಗೆ ಅವಕಾಶವಿಲ್ಲ.[1921 ಹುದ್ದೆಗೆ ಅರ್ಜಿ ಆಹ್ವಾನಿಸಿದ KPTCL]

jobs

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ. 500 (ಒಂದು ಹುದ್ದೆಗೆ), ರೂ.750 (ಎರಡೂ ಹುದ್ದೆಗೆ). ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರೂ. 250 (ಒಂದು ಹುದ್ದೆ), ರೂ.400 (ಎರಡೂ ಹುದ್ದೆ). ಅರ್ಜಿ ಶುಲ್ಕಗಳನ್ನು ಹಿಂದಿರುಗಿಸಲಾಗುವುದಿಲ್ಲ.[159 ಹುದ್ದೆಗೆ ಅರ್ಜಿ ಆಹ್ವಾನಿಸಿದ KPSC]

Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ

ಪ್ರಮುಖ ದಿನಾಂಕಗಳು [ನೇಮಕಾತಿ ವಿವರ ಓದಲು ವೆಬ್ ಸೈಟ್ ವಿಳಾಸ]

* ಸೆ.16ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ
* ಅಕ್ಟೋಬರ್ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
* ಪರೀಕ್ಷಾ ಶುಲ್ಕ ಪಾವತಿ ಮಾಡಲು ಅಕ್ಟೋರ್ 18 ಕೊನೆ ದಿನ (ಇ-ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು)

job

ಕನ್ನಡದಲ್ಲಿ ನೇಮಕಾತಿ ಆದೇಶ ಓದಿ

[ಇಂಗ್ಲೀಷ್ ನಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಲು ಕ್ಲಿಕ್ ಮಾಡಿ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka Examinations Authority (KEA) invites applications for Grama panchayat secretary and Panchayat development officer (PDO) post examination. October 15, 2016 last date for submit applications.
Please Wait while comments are loading...