Government Jobs: ಪಿಡಿಓ ಹುದ್ದೆ ನೇಮಕಾತಿ; ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ
ಬಹುದಿನಗಳ ಬೇಡಿಕೆಯಂತೆ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ (PDO) ಹುದ್ದೆ ತುಂಬಲು ಸರ್ಕಾರ ಮುಂದಾಗಿದ್ದು ಅರ್ಹ ಅಭ್ಯರ್ಥಿಗಳ ನೇಮಕಾತಿ ಮಾಡಲು ಕೆಪಿಎಸ್‌ಸಿ ಯಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಂದಿನ ದಿನಗಳಲ್ಲಿ ಮತ್ತಷ್ಟು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಗೆ ಕ್ರಮ ವಹಿಸುವ ಭರವಸೆ ನೀಡಿದ್ದಾರೆ.

ಟ್ವೀಟ್‌ಮಾಡಿರುವ ಅವರು, "ನಾವು ಅಧಿಕಾರ ವಹಿಸಿಕೊಂಡಾಗ ನೂತನ ನೇಮಕಾತಿಗಳಿಗಾಗಿ ನಮ್ಮ ಇಲಾಖೆಯಲ್ಲಿದ್ದ ಹಲವಾರು ನಿರ್ಬಂಧನೆ ಹಾಗೂ ಅಡೆತಡೆಗಳನ್ನು ಈಗ ಸಂಪೂರ್ಣವಾಗಿ ನಿವಾರಿಸಿ ಎಲ್ಲಾ ನೂತನ ನೇಮಕಾತಿಗಳಿಗೆ ದಾರಿ ಮಾಡಿಕೊಡಲಾಗಿದೆ. ಅಗತ್ಯವಿದ್ದ ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಕ್ಯಾಬಿನೆಟ್ ಅನುಮೋದನೆ ಪಡೆದು, ನೂತನ ನೇಮಕಾತಿಗಳನ್ನು ಶೀಘ್ರವಾಗಿ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಲಾಗಿದೆ." ಎಂದಿದ್ದಾರೆ.
ನಾವು ಅಧಿಕಾರ ವಹಿಸಿಕೊಂಡಾಗ ನೂತನ ನೇಮಕಾತಿಗಳಿಗಾಗಿ ನಮ್ಮ ಇಲಾಖೆಯಲ್ಲಿದ್ದ ಹಲವಾರು ನಿರ್ಬಂಧಗಳು ಹಾಗೂ ಅಡೆತಡೆಗಳನ್ನು ಈಗ ಸಂಪೂರ್ಣವಾಗಿ ನಿವಾರಿಸಿ ಎಲ್ಲಾ ನೂತನ ನೇಮಕಾತಿಗಳಿಗೆ ದಾರಿ ಮಾಡಿಕೊಡಲಾಗಿದೆ. ಅಗತ್ಯವಿದ್ದ ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಕ್ಯಾಬಿನೆಟ್ ಅನುಮೋದನೆ ಪಡೆದು, ನೂತನ ನೇಮಕಾತಿಗಳನ್ನು…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 16, 2024
ಇದೀಗ ರಾಜ್ಯಾದ್ಯಂತ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (PDO) ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಕರೆ ನೀಡಿದ್ದು ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಶುಭ ಕೋರುತ್ತೇನೆ. ಈ 247 ಹುದ್ದೆಗಳ ಪೈಕಿ 97 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿವೆ.
ಇದು ಕೇವಲ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಇಲಾಖೆಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯದ ಯುವಜನತೆಯ ಸ್ವಾವಲಂಬನೆಯ ಹಕ್ಕಿಗಾಗಿ ಹಾಗೂ ಅವರನ್ನು ಉದ್ಯಮಶೀಲರನ್ನಾಗಿಸಲು ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಯಾವಾಗ?
ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.












Click it and Unblock the Notifications