KPSC Recruitment: PDO ಹುದ್ದೆಗೆ ಅರ್ಜಿ ಸಲ್ಲಿಕೆಗೆ ವಯೋಮಿತಿ ಸಡಿಲ, ವಿವರ

ಬೆಂಗಳೂರು, ಸೆಪ್ಟೆಂಬರ್ 18: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಸರ್ಕಾರ ಆದೇಶವನ್ನು ಹೊರಡಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಅನುಕೂಲವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದೆ.

ಈ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ. ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದಾರೆ. ಉಲ್ಲೇಖ ಅಧಿಸೂಚನೆ ಸಂಖ್ಯೆ:ಇ(2)597/2023-24/ಪಿಎಸ್‌ಸಿ, ದಿನಾಂಕ 15.03.2024 ಉಲ್ಲೇಖವನ್ನು ಮಾಡಿ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದಾರೆ.

PDO Recruitment Age Relaxation KPSC Notification

ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಳಿಕೆ ಮೂಲ ವೃಂದದ 150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ ಎಂದು ಹೇಳಿದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು 'ಸಾಮಾನ್ಯ ಅರ್ಹತೆ-35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪವರ್ಗ-1- 40 ವರ್ಷಗಳು ಎಂದು ನಿಗದಿಪಡಿಸಲಾಗಿತ್ತು.

ವಯೋಮಿತಿ ಸಡಿಲಿಕೆ ಆದೇಶ: ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ 10.09.2024ರಲ್ಲಿ, ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ. 'ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ'. ಮೇಲ್ಕಂಡ ಸರ್ಕಾರದ ಆದೇಶದನ್ವಯ ಸದರಿ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ ವಯೋಮಿತಿಯನ್ನ ಕೆಳಕಂಡಂತೆ ಮಾರ್ಪಾಡು ಮಾಡಲಾಗಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 03.10.2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅರ್ಹತೆ-ಗರಿಷ್ಠ 38 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗರಿಷ್ಠ 41 ವರ್ಷಗಳು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಗರಿಷ್ಠ 43 ವರ್ಷಗಳು.

ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ಗ್ರೂಪ್-ಸಿ ವೃಂದದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ 18.09.2024 ರಿಂದ 03.10.2024ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಹೇಳಿದೆ.

ವಿಶೇಷ ಸೂಚನೆಗಳು

* ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

* ವಯೋಮಿತಿಯನ್ನು ಹೊರತುಪಡಿಸಿ ಉಳಿದಂತೆ, ಆಯೋಗದ ಅಧಿಸೂಚನೆ ಸಂಖ್ಯೆ:ಇ(2)597/2023-24/ಪಿಎಸ್‌ಸಿ, ದಿನಾಂಕ 15.03.2024ರಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಯನ್ನು ಓದಿಕೊಳ್ಳತಕ್ಕದ್ದು.

* ಈಗಾಗಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+