KPSC Recruitment: ಕೆಪಿಎಸ್‌ಸಿ ನೇಮಕಾತಿ, ವೇತನ 37 ರಿಂದ 70 ಸಾವಿರ

ಬೆಂಗಳೂರು, ಮಾರ್ಚ್ 26: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 97 ಹುದ್ದೆ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು 15/4/2024 ರಿಂದ 15/5/2024ರ ತನಕ ಅರ್ಜಿಗಳನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುತ್ತದೆ.

PDO Recruitment Hyderabad Karnataka Region Apply Till 15th May

ಈ ಹುದ್ದೆಗಳಿಗೆ 37,900 ರಿಂದ 70,850 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಒಮ್ಮೆ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ಬರುವ ಯಾವುದೇ ಮನವಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಆದ್ದರಿಂದ ಎಲ್ಲಾ ವಿವರ ಓದಿ ಅರ್ಥೈಸಿಕೊಂಡು ವಿವರಗಳನ್ನು ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ.

ಅರ್ಜಿ ಶುಲ್ಕದ ವಿವರ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿ ವಾಪಸ್ ನೀಡಲಾಗುವುದಿಲ್ಲ ಅಥವ ಅದನ್ನು ಆಯೋಗವು ನಡೆಸುವ ಇತರ ಯಾವುದೇ ಪರೀಕ್ಷೆಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ.ಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ.ಗಳು. ಮಾಜಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ವಯೋಮಿತಿ ವಿವರಗಳು: ಈ ಹುದ್ದೆಗೆ ಅಭ್ಯರ್ಥಿಗಳನ್ನು ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನಿಯಮ) ನಿಯಮ 1977ರಲ್ಲಿ ನಿರ್ದಿಷ್ಟಪಡಿಸಿರುವಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಆಯಾ ಮೀಸಲಾತಿಗಳ ಮುಂದೆ ನೀಡಲಾಗಿರುವ ಕನಿಷ್ಠ ವಯೋಮಿತಿ ಹೊಂದಿರತಕ್ಕದ್ದು. ಗರಿಷ್ಠ ವಯೋಮಿತಿ ಮೀರಬಾರದು.

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಗರಿಷ್ಠ ವಯೋಮತಿ 40 ವರ್ಷಗಳು.

ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಪ್ರಮಖ ಮಾಹಿತಿಯೊಂದನ್ನು ನೀಡಿದೆ. ಈ ಅಧಿಸೂಚನೆಯು ಜಾರಿಯಾದ ಮೇಲೆ ಈ ಅಧಿಸೂಚನೆಯಲ್ಲಿ ನಮೂದಿಸಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಯಾವುದೇ ನಿಯಮಗಳು ಮತ್ತು ನಿರ್ದೇಶನಗಳನ್ನು ಜಾರಿ ಮಾಡಿದಲ್ಲಿ, ತಿದ್ದುಪಡಿ ಮಾಡಿದಲ್ಲಿ, ಪರಿಷ್ಕರಿಸಿದಲ್ಲಿ ಅವುಗಳನ್ನು ನೇಮಕಾತಿ ಪ್ರಕ್ರಿಯೆಯ ಸಮುಚಿತ ಹಂತದಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದೆ.

ಆಯೋಗವು ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸುವುದಿಲ್ಲ, ವಿಳಾಸ ಬದಲಾವಣೆ ಇದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮನವಿಯ ಮೂಲಕ ಆಯೋಗದ ಗಮನಕ್ಕೆ ತರತಕ್ಕದ್ದು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ಆಯೋಗವು ಪ್ರಯತ್ನಿಸುವುದು, ಆದಾಗೂ ಈ ವಿಚಾರದಲ್ಲಿ ಆಯೋಗವು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-30574957/ 30574901 0821-2545956, 0831-2475345, 08472-227944, 08182-228099 ಸಂಪರ್ಕಿಸಬಹುದು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ವಿಭಾಗದಲ್ಲಿ NOTIFICATION FOR POST OF PANCHAYAT DEVELOPMENT OFFICER (HK) IN RDPR DEPT ಅಧಿಸೂಚನೆ ನೋಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+