16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಪಿಜಿಸಿಐಎಲ್
ಬೆಂಗಳೂರು, ಅಕ್ಟೋಬರ್ 31 : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ 16 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30, 2018 ಕೊನೆಯ ದಿನವಾಗಿದೆ.
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.
ಒಟ್ಟು 16 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆಗೆ ವಿದ್ಯಾರ್ಹತೆ
ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ (ಪವರ್)/ಎಲೆಕ್ಟ್ರಿಕಲ್& ಎಲೆಕ್ಟ್ರಾನಿಕ್ಸ್/ಪವರ್ ಇಂಜಿನಿಯರಿಂಗ್/ಪವರ್ ಸಿಸ್ಟಮ್ ಇಂಜಿನಿಯರಿಂಗ್/ಸಿವಿಎಲ್/ಮೆಕ್ಯಾನಿಕಲ್ ಡಿಸಿಪ್ಲೀನ್‌ನಲ್ಲಿ ಇಂಜಿನಿಯರಿಂಗ್ ಪದವಿಯನ್ನು ಶೇ 65 ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ಸ್ನಾತಕೋತ್ತರ ಪದವಿ/ಡಿಪ್ಲೊಮಾವನ್ನು ಇಂಡಿಸ್ಟ್ರಿಯಲ್ ಸೇಫ್ಟಿಯಲ್ಲಿ ಶೇ 65ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರುವವರು, ಲೇಬರ್ ಇನ್ಸಿಟಿಟ್ಯೂಟ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಬಿಇ/ಬಿ.ಟೆಕ್/ಬಿಎಸ್‌ಸಿಯನ್ನು ಎಲೆಕ್ಟ್ರಿಕಲ್ ಡಿಸಿಪ್ಲೀನ್ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಶೇ 60ರಷ್ಟು ಅಂಕಗಳೊಂದಿಗೆ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳಿಗೆ ವಯೋಮಿತಿ
ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ 30 ವರ್ಷ, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 42 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 30 ನವೆಂಬರ್ 2018ಕ್ಕೆ ಅನ್ವಯವಾಗುವಂತೆ.

ವೇತನ ಶ್ರೇಣಿಯ ವಿವರ
* ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ 50000-160000 ಪ್ರತಿ ತಿಂಗಳು
* ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 80000-22000 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರಗಳು
ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಉಳಿದ ವರ್ಗದ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.












Click it and Unblock the Notifications