ಪವರ್ ಗ್ರಿಡ್ ಸಂಸ್ಥೆಯಲ್ಲಿ ಡಿಪ್ಲೋಮಾ ಟ್ರೈನಿ ಹುದ್ದೆಗಳಿವೆ
ಬೆಂಗಳೂರು, ನವೆಂಬರ್ 29: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟಿಸಲಾಗಿದೆ. 35 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಟ್ರೈನಿ ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಡಿಸೆಂಬರ್ 16, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)
ಒಟ್ಟು ಹುದ್ದೆ: 35 '
ಹುದ್ದೆ ಹೆಸರು: ಡಿಪ್ಲೋಮಾ ಟ್ರೈನಿ
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 16, 2019
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೂರು ವರ್ಷಗಳ ಡಿಪ್ಲೋಮಾ ಕನಿಷ್ಠ 70% ಅಂಕಗಳು(ಸಾಮಾನ್ಯ/ಒಬಿಸಿ), ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ವಿನಾಯಿತಿ ಇದೆ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಾಜಿ ಯೋಧ/ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ಇತರೆ: 300
ವಯೋಮಿತಿ:
ಸಾಮಾನ್ಯ: 27 ವರ್ಷ.
ಒಬಿಸಿ(ಎನ್ ಸಿಎಲ್): 30 ವರ್ಷ
ಎಸ್ ಸಿ/ ಎಸ್ಟಿ: 32 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26.11.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.12.2019.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications