36 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಪಿಜಿಸಿಐಎಲ್
ಬೆಂಗಳೂರು, ಫೆಬ್ರವರಿ 28 : ಪಿಜಿಸಿಐಎಲ್ 36 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 6/3/2020 ಕೊನೆಯ ದಿನವಾಗಿದೆ.
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಫೀಲ್ಡ್ ಸೂಪವರ್ ವೈಸರ್ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿಟೆಕ್, ಬಿಎಸ್‌ಸಿ, ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 29 ವರ್ಷದ ವಯೋಮಿತಿಯನ್ನು ಮೀರಿರಬಾರದು. (6 ಮಾರ್ಚ್ 2020ಕ್ಕೆ ಅನ್ವಯವಾಗುವಂತೆ).

ಫೀಲ್ಡ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಫೀಲ್ಡ್ ಸೂಪರ್ ವೈಸರ್ ಹುದ್ದೆಗೆ 300 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications