Job News: ಬೆಂಗಳೂರಿನಲ್ಲಿ 40,000 ಉದ್ಯೋಗ ಸೃಷ್ಟಿಗೆ ಪ್ಲಾನ್: ರೈಲ್ವೆ ಸಚಿವ ಅಶ್ವಿನಿ ವೈಷ್ಟವ್
Job News: ರಾಜ್ಯದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಲಿವೆ. ಇದೀಗ ಬೆಂಗಳೂರಿನ ಬಳಿ ಬೃಹತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸುವ ಸಂದೇಶವೊಂದನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನೀಡಿದ್ದಾರೆ. ಹಾಗಾದರೆ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರು ಬಳಿಯೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ ಆಗಲಿದ್ದು, 40,000 ಉದ್ಯೋಗ ಸೃಷ್ಟಿಯಾಗುವ ಗುರಿಯಿದೆ. ಮುಂದಿನ ಬಾರಿ ಬಂದಾಗ ನಾನು ಈ ಕಂಪನಿಗೆ ಭೇಟಿ ನೀಡುತ್ತೇನೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಪಾದನಾ ವಲಯಕ್ಕೂ ಬಜೆಟ್ ಹೆಚ್ಚಿನ ಆದ್ಯತೆ ನೀಡಿದೆ. ಉತ್ಪಾದನಾ ವಲಯದಿಂದಲೇ ಉದ್ಯೋಗ ಸೃಷ್ಟಿ ಆಗುವುದು. ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್, ಸೆಮಿ ಕಂಡಕ್ಟರ್, ಫೂಟ್‌ವೇರ್ ಉತ್ಪಾದಕ ವಲಯಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ.
ಕರ್ನಾಟಕ ರೈಲ್ವೆಗೆ ಬಜೆಟ್‌ನಲ್ಲಿ ಎಷ್ಟು ಅನುದಾನ ನೀಡಲಾಗಿದ ಎಂದು ವಿವರಿಸಿದ್ದಾರೆ. 7,564 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಯುಪಿಎ ಅವಧಿಯಲ್ಲಿ 850 ಕೋಟಿ ರೂಪಾಯಿ ನೀಡಲಾಗುತ್ತಿತ್ತು. 51,479 ಕೋಟಿಯಷ್ಟು ರೈಲ್ವೇ ವಲಯದಲ್ಲಿ ಬಂಡವಾಳ ಹೂಡಿಕೆ ಮಾಡಲಾಗಿದೆ ಎಂದರು.
ಅಮೃತ್ ಸ್ಟೇಷನ್ ಯೋಜನೆಯಡಿ 61 ರೈಲ್ವೇ ನಿಲ್ದಾಣಗಳ ಮರು ನಿರ್ಮಾಣವಾಗಿದೆ. 1,652 ಕಿಲೋ ಮೀಟರ್ ಹೊಸ ರೈಲ್ವೇ ಮಾರ್ಗದ ನಿರ್ಮಾಣ ರಾಜ್ಯದಲ್ಲಿ ಆಗಿದೆ. ಈಗಾಗಲೇ ಕರ್ನಾಟಕದಲ್ಲಿ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿದ್ದು, ಇನ್ನಷ್ಟು ಬರಲಿವೆ. ಉಪನಗರ ರೈಲ್ವೇ ಯೋಜನೆಗೆ 15,762 ಕೋಟಿ ರೂಪಾಯಿ ಕೊಡಲಾಗಿದ್ದು, ಮೆಟ್ರೋಗೆ 15,611 ಕೋಟಿ ರೂಪಾಯಿ ಕೊಡಲಾಗಿದೆ ಎಂದು ಹೇಳಿದರು.
ಕಳೆದ 60 ವರ್ಷದಲ್ಲಾಗದಿರುವ ಕೆಲಸ ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಆಗಿದೆ. ಒಂದು ಮತ್ತು 2ನೇ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯ ದೇಶದ ಯಾವ ಭಾಗಕ್ಕೆ ಹೋದರೂ ಕಾಣುತ್ತದೆ. 12 ಲಕ್ಷದವರೆಗೆ ತೆರಿಗೆ ಇಲ್ಲದಿರುವುದು ಐಐಎಂ, ಐಐಟಿ ಇದೆಲ್ಲಾ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಿದೆ ಎಂದರು.
ವಾಜಪೇಯಿ ಅವಧಿ ಬಳಿಕ ಯುಪಿಎ ಅವಧಿಯಲ್ಲಿ ಭಾರತದ ಆರ್ಥಿಕತೆ ತುಂಬಾ ಕೆಟ್ಟ ಮಟ್ಟದಲ್ಲಿತ್ತು. 2014ರಲ್ಲಿ ಬ್ಯಾಂಕಿಂಗ್ ವಲಯ ಅಷ್ಟು ಉತ್ತಮ ಆಗಿರಲಿಲ್ಲ. ಪ್ರಧಾನಿ ಮೋದಿ ಅದಕ್ಕೊಂದು ಆಯಾಮ ನೀಡಿದರು. ಈ ಮೂಲಕ ಪ್ರತಿ ವರ್ಷವೂ ಸಹ ಹೆದ್ದಾರಿ, ರೈಲ್ವೇ, ಏರ್‌ಪೋರ್ಟ್ ಅಭಿವೃದ್ಧಿ ಆಯಿತು ಎಂದು ತಿಳಿದ್ದಾರೆ.
ಈ ಬಾರಿಯ ಬಜೆಟ್‌ನಲ್ಲಿ ಪ್ರಮುಖ ಅಂಶಗಳು ಘೋಷಣೆಯಾಗಿವೆ. ಪ್ರಧಾನಿ ಮೋದಿ ಆರ್ಥಿಕ ಚಿಂತನೆಗಳು ತುಂಬಾ ಬದಲಾವಣೆ ತಂದಿದೆ. 10 ವರ್ಷಗಳ ಹಿಂದೆ ಕಾಲ್ ಡ್ರಾಪ್ ಆಗುವುದು ದೊಡ್ಡ ಚರ್ಚೆ ಆಗುತ್ತಿತ್ತು. ಇದೀಗ ನಮಗೆ ಉತ್ತಮ 5ಜಿ ನೆಟ್‌ವರ್ಕ್ ಇದೆ. ಕಳೆದ 10 ವರ್ಷಗಳಿಂದ ವಿವಿಗಳು, ಐಐಎಂ, ಐಐಟಿ, ಮೆಡಿಕಲ್ ಕಾಲೇಜುಗಳ ಸಂಖ್ಯೆ ಹೆಚ್ಚಾಗಿವೆ ಎಂದರು.
ಬಡ-ಮಧ್ಯಮ ವರ್ಗದ ಮೇಲೆ ಈ ಬಾರಿ ಬಜೆಟ್‌ನಲ್ಲಿ ಕೇಂದ್ರಿಕರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿಯಂತಹ ರೈತ ಕಲ್ಯಾಣ ಯೋಜನೆಗಳು ಬದಲಾವಣೆಗೆ ಸಾಕ್ಷಿಯಾಗಿವೆ. ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ದೊಡ್ಡ ನಿರೀಕ್ಷೆ, ಭರವಸೆ ನಮ್ಮ ಸರ್ಕಾರದಿಂದ ಸಿಕ್ಕಿದೆ. ಈಗ ದೇಶ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಸೃಷ್ಟಿಸಿದೆ. ಹಣದುಬ್ಬರಕ್ಕೆ ಕಡಿವಾಣ ಬಿದ್ದಿದೆ ಎಂದು ಹೇಳಿದರು. ಅಲ್ಲದೆ ಮುಂದಿನ ವರ್ಷದ ವೇಳೆಗೆ ನಮ್ಮ ದೇಶ ಆರ್ಥಿಕತೆಯಲ್ಲಿ ಇನ್ನೂ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲಿದೆ ಎಂದು ಹೇಳಿದರು.












Click it and Unblock the Notifications