ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಂ ಮೋದಿ ದೀಪಾವಳಿ ಜಾಬ್ ಫೆಸ್ಟ್: 10 ಲಕ್ಷ ಜನರಿಗೆ ಉದ್ಯೋಗ

|
Google Oneindia Kannada News

ನವದೆಹಲಿ, ಅಕ್ಟೋಬರ್‌ 20: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 22 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವ ಜಾಬ್ ಫೆಸ್ಟ್‌ನ ಮೆಗಾ 'ರೋಜ್‌ಗಾರ್ ಮೇಳ'ಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭದಲ್ಲಿ 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಗುರುವಾರ ತಿಳಿಸಿದೆ.

ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನ ಮಂತ್ರಿಯವರ ನಿರಂತರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿದೆ.

ಬೆಂಗಳೂರಿಗೆ ನ.11ಕ್ಕೆ ಪ್ರಧಾನಿ ಆಗಮನ: ಸೂಕ್ತ ಸಂಚಾರ ವ್ಯವಸ್ಥೆಗೆ ಸಿಎಂ ಸೂಚನೆಬೆಂಗಳೂರಿಗೆ ನ.11ಕ್ಕೆ ಪ್ರಧಾನಿ ಆಗಮನ: ಸೂಕ್ತ ಸಂಚಾರ ವ್ಯವಸ್ಥೆಗೆ ಸಿಎಂ ಸೂಚನೆ

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ನಿರಂತರ ಟೀಕೆಗಳ ನಡುವೆ ಈ ಬೆಳವಣಿಗೆ ನಡೆದಿದೆ. ಸಾಕಷ್ಟು ಉದ್ಯೋಗಾವಕಾಶಗಳ ಕೊರತೆಯಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಇದನ್ನು ತಿರಸ್ಕರಿಸಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಪ್ರತಿಪಕ್ಷಗಳನ್ನು ಎದುರಿಸಲು ಬಿಜೆಪಿಗೆ ಈ ಕಾರ್ಯಕ್ರಮ ಸಹಾಯ ಮಾಡುತ್ತದೆ.

PM Modi Deepavali Job Fest: Jobs for 10 Lakhs people

ಈ ವರ್ಷದ ಜೂನ್‌ನಲ್ಲಿ, ಪ್ರಧಾನಿ ಮೋದಿ ಅವರು ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು "ಮಿಷನ್ ಮೋಡ್" ನಲ್ಲಿ ನೇಮಿಸಿಕೊಳ್ಳಲು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ತಿಳಿಸಿದ್ದರು. ಗುರುವಾರದ ಹೇಳಿಕೆಯ ಪ್ರಕಾರ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ ನಂತರ ಪಿಎಂ ಮೋದಿಯವರ ನಿರ್ದೇಶನ ಬಂದಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.

ದೇಶದಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಭಾರತ ಸರ್ಕಾರದ 38 ಸಚಿವಾಲಯಗಳು ಅಥವಾ ಇಲಾಖೆಗಳಿಗೆ ಸೇರಿಕೊಳ್ಳುತ್ತವೆ. ನೇಮಕಗೊಂಡವರು ಗ್ರೂಪ್ ಎ ಮತ್ತು ಬಿ (ಗೆಜೆಟೆಡ್), ಗ್ರೂಪ್ ಬಿ (ನಾನ್ ಗೆಜೆಟೆಡ್) ಮತ್ತು ಸಿ ಗುಂಪಿನಲ್ಲಿ ವಿವಿಧ ಹಂತಗಳಲ್ಲಿ ಸರ್ಕಾರಕ್ಕೆ ಸೇರುತ್ತಾರೆ. ನೇಮಕಾತಿಗಳನ್ನು ಮಾಡಲಾಗುತ್ತಿರುವ ಹುದ್ದೆಗಳಲ್ಲಿ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್ಸ್‌ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಸೇರಿವೆ ಎಂದು ಅದು ಹೇಳಿದೆ.

PM Modi Deepavali Job Fest: Jobs for 10 Lakhs people

ಈ ನೇಮಕಾತಿಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ ಯುಪಿಎಸ್‌ಸಿ, ಎಸ್‌ಎಸ್‌ಸಿ ಮತ್ತು ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡುತ್ತಿವೆ. ತ್ವರಿತ ನೇಮಕಾತಿಗಾಗಿ, ಆಯ್ಕೆ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

English summary
Prime Minister Narendra Modi will launch the mega job fest 'Rozgar Mela' on October 22 through video conference to recruit 10 lakh people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X